HomeLatest Newsಪ್ರಧಾನಿ ಮೋದಿಗೆ ಪತ್ರ ಬರೆದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ

ಪ್ರಧಾನಿ ಮೋದಿಗೆ ಪತ್ರ ಬರೆದು ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಡಿ.ಕೆ. ಶಿವಕುಮಾರ್ ತೀವ್ರ ಆಕ್ರೋಶ

​ಬೆಂಗಳೂರು- ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ನಿರ್ವಹಣೆಯ ವೈಫಲ್ಯ ಹಾಗೂ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಮೇಲೆ ಪೊಲೀಸರ ಮೂಲಕ ದೌರ್ಜನ್ಯ ಎಸಗುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ತೀವ್ರವಾಗಿ ಖಂಡಿಸಿ, ಕರ್ನಾಟಕದ ಮುಖ್ಯಮಂತ್ರಿ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತವಾಗಿ ಪತ್ರ ಬರೆದಿದ್ದಾರೆ.

​ದೇಶದ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿರುವ ಅವರು, ಶಿಕ್ಷಣ ವ್ಯವಸ್ಥೆಯಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸಲು ತಕ್ಷಣವೇ ಕಠಿಣ ಹಾಗೂ ಪಾರದರ್ಶಕ ಕ್ರಮಗಳನ್ನು ಕೈಗೊಳ್ಳುವಂತೆ ಬಲವಾಗಿ ಆಗ್ರಹಿಸಿದ್ದಾರೆ.

ಶಿವಕುಮಾರ್ ಅವರ ಪ್ರಮುಖ ಆಗ್ರಹಗಳು

ದೋಷಪೂರಿತವಾದ ನೀಟ್ ಪರೀಕ್ಷಾ ಪದ್ಧತಿಯನ್ನು ಸಂಪೂರ್ಣವಾಗಿ ಹಿಂಪಡೆಯಬೇಕು. ಇದರ ಬದಲಾಗಿ ಸಂಪೂರ್ಣ ಪಾರದರ್ಶಕತೆ ಮತ್ತು ಅರ್ಹತೆಗೆ ಮಾತ್ರ ಆದ್ಯತೆ ನೀಡುವ ಹಿಂದಿನ ಸಿಇಟಿ (CET) ಪದ್ಧತಿಯನ್ನು ಮರುಸ್ಥಾಪಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

​ಕಾಲಮಿತಿಯಲ್ಲಿ ನಿಷ್ಪಕ್ಷಪಾತ ತನಿಖೆ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ಇರುವ ದೊಡ್ಡ ಜಾಲವನ್ನು ಪತ್ತೆಹಚ್ಚಲು ಕಾಲಮಿತಿಯೊಳಗೆ ಪಾರದರ್ಶಕ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಬೇಕು.

ಪರೀಕ್ಷಾ ವ್ಯವಸ್ಥೆಯ ವೈಫಲ್ಯದಿಂದ ಮನನೊಂದು ಪ್ರಾಣ ಕಳೆದುಕೊಂಡ ನಿರ್ದೋಷಿ ವಿದ್ಯಾರ್ಥಿಗಳ ಕುಟುಂಬಗಳಿಗೆ ಹಾಗೂ ಶಾಂತಿಯುತ ಪ್ರತಿಭಟನೆ ವೇಳೆ ಲಾಠಿಚಾರ್ಜ್‌ ಮತ್ತು ಅಶ್ರುವಾಯು ದಾಳಿಯಿಂದ ಗಾಯಗೊಂಡ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರವನ್ನು ಒದಗಿಸಬೇಕು

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉತ್ತರ ಬೇಕು

ಪ್ರಜಾಪ್ರಭುತ್ವದಡಿಯಲ್ಲಿ ತಮ್ಮ ಹಕ್ಕಿಗಾಗಿ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿಚಾರ್ಜ್‌ ಹಾಗೂ ಅಶ್ರುವಾಯು ಪ್ರಯೋಗದಂತಹ ಘಟನೆಗಳಿಗೆ ನೇರ ಹೊಣೆ ಯಾರು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು.

ಯಾವುದೇ ಮುಕ್ತ ಚರ್ಚೆಗಳಿಲ್ಲದೆ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ಬಿಟ್ಟು, ವಿದ್ಯಾರ್ಥಿಗಳು, ಯುವಜನರು ಹಾಗೂ ದೇಶದ ಹಿರಿಯ ಶಿಕ್ಷಣ ತಜ್ಞರೊಂದಿಗೆ ಮುಕ್ತ ಮತ್ತು ಅರ್ಥಪೂರ್ಣ ಸಂವಾದ ನಡೆಸಬೇಕು.

ಸತತ ಹಗರಣಗಳಿಂದ ದೇಶದ ಶಿಕ್ಷಣ ವ್ಯವಸ್ಥೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಮೇಲಿನ ಸಾರ್ವಜನಿಕರ ವಿಶ್ವಾಸ ಸಂಪೂರ್ಣ ಕುಸಿದಿದ್ದು, ಅದನ್ನು ಮರುಸ್ಥಾಪಿಸಲು ವಿಶ್ವಾಸಾರ್ಹ ಕ್ರಮಗಳನ್ನು ಜಾರಿಗೆ ತರಬೇಕು.

ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಒತ್ತಾಯ

“ಪ್ರಶ್ನಿಸುತ್ತಿರುವ ನಮ್ಮ ಯುವಜನತೆಗೆ ಉತ್ತರ ಪಡೆಯುವ ಮೂಲಭೂತ ಹಕ್ಕಿದೆ. ವಿದ್ಯಾರ್ಥಿಗಳ ದಾರಿಯನ್ನು ಬ್ಯಾರಿಕೇಡ್‌ಗಳನ್ನು ಹಾಕಿ ತಡೆಯುವುದಲ್ಲ, ಬದಲಾಗಿ ಅವರ ಆಕ್ರೋಶಕ್ಕೆ ಕಿವಿಗೊಟ್ಟು ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಬೇಕು” ಎಂದು ಆಗ್ರಹಿಸಿದ್ದಾರೆ.

​ದೇಶದ ಯುವ ಸಮುದಾಯದ ಭವಿಷ್ಯದ ರಕ್ಷಣೆಗಾಗಿ ಕೇಂದ್ರ ಸರ್ಕಾರವು ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು, ಕೂಡಲೇ ಶಿಕ್ಷಣ ಕ್ಷೇತ್ರದಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಅವರು ಪತ್ರದ ಮೂಲಕ ಕಟುವಾಗಿ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular