NEET ಪರೀಕ್ಷೆಯಲ್ಲಿ ಭಾರಿ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ ಬಗ್ಗೆ NTA ಮಹತ್ವದ ಹೇಳಿಕೆ

ನವದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(NEET-UG) 2024 ರ ಸಂಪೂರ್ಣ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ ಮತ್ತು ದೇಶದಾದ್ಯಂತ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯಾಗಿಲಿಲ್ಲ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ NTA ಹೇಳಿದೆ.

ಮೇ 5 ರಂದು ಪರೀಕ್ಷೆ ನಡೆದಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಿತ್ತು. ಅಭ್ಯರ್ಥಿಗಳು ಎತ್ತಿರುವ ಸಮಸ್ಯೆಗಳ ಕುರಿತು ನವದೆಹಲಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಎನ್‌ಟಿಎ ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್, ಯಾವುದೇ ಪೇಪರ್ ಸೋರಿಕೆಯಾಗಿಲ್ಲ ಎಂದು ತಿಳಿಸಿದ್ದಾರೆ.

ನೀಟ್ ಪರೀಕ್ಷೆಯ ವಿಷಯವು ಆರು ಕೇಂದ್ರಗಳಿಗೆ ಸಂಬಂಧಿಸಿದೆ. ಪ್ರಶ್ನೆ ಪತ್ರಿಕೆಯ ತಪ್ಪು ವಿತರಣೆಯಿಂದ ಸಮಯ ಕಳೆದುಕೊಂಡ 1,600 ಅಭ್ಯರ್ಥಿಗಳಿಗೆ ಸಂಬಂಧಿಸಿದೆ. ಈ 1,600 ಮಂದಿಯ ಕುಂದುಕೊರತೆಗಳನ್ನು ವಿಶ್ಲೇಷಿಸಲು ಎನ್‌ಟಿಎ ಉನ್ನತ ಅಧಿಕಾರದ ಸಮಿತಿಯನ್ನು ರಚಿಸಿದೆ ಎಂದು ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read