ಕಲಬುರಗಿ: ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದ ಘಾನೆ ಕಲಬುರಗಿಯಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿ ಶ್ರೀಪಾದ್ ಪಾಟೀಲ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪರೀಕ್ಷಾರ್ಥಿ ಶ್ರೀಪಾದ್ ಪಾಟೀಲ್ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿ ಬಂಧಿಸಲಾಗಿದೆ ಎಂದು ಕಮಿಷನರ್ ಎಸ್.ಡಿ.ಶರಣಪ್ಪ ತಿಳಿಸಿದ್ದಾರೆ. ಅರೀಕ್ಷಾ ಕೇಂದ್ರದ ಸಿಬ್ಬಂದಿ ಶರಣಗೌಡ, ಗಣೇಶ್ ಬಂಧಿತರು ಎಂದು ತಿಳಿಸಿದರು.