HomeKarnatakaಮೇ 3ರಂದು NEET ಪರೀಕ್ಷೆ : ನಿಷೇಧಾಜ್ಞೆ ಜಾರಿ

ಮೇ 3ರಂದು NEET ಪರೀಕ್ಷೆ : ನಿಷೇಧಾಜ್ಞೆ ಜಾರಿ

ಚಿತ್ರದುರ್ಗ : ಮೇ 03ರಂದು ನ್ಯೂಡೆಲ್ಲಿಯ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ವತಿಯಿಂದ ನಡೆಯುವ ನೀಟ್-2026 ಪರೀಕ್ಷೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಕಲಂ 163ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ಮೇ 03ರಂದು ಭಾನುವಾರ ಮಧ್ಯಾಹ್ನ 2 ರಿಂದ 5 ರವರೆಗೆ ನೀಟ್ ಪರೀಕ್ಷೆ ನಡೆಯಲಿದೆ. ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಚಿತ್ರದುರ್ಗ ನಗರದ ನಗರಸಭೆ ಹತ್ತಿರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು, ಚಿತ್ರದುರ್ಗ ನಗರದ ಪಿ.ಬಿ.ರಸ್ತೆಯ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು, ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ರಸ್ತೆಯ ಸರ್ಕಾರಿ ಕಲಾ ಕಾಲೇಜು, ಚಳ್ಳಕೆರೆ ಹೆಚ್‍ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಳ್ಳಕೆರೆ ಸೋಮಗುದ್ದು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನೀಟ್ ಪರೀಕ್ಷೆ ನಡೆಯಲಿದ್ದು, ಒಟ್ಟು 2835 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕೆಂದು ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಚಟುವಟಿಕೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತವಾತಾವರಣದಲ್ಲಿ ನಡೆಸಲು ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿ ಪ್ರದೇಶದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ಮೊಬೈಲ್ ಪೋನ್‍ಗಳನ್ನು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular