HomeLatest NewsBIG NEWS: ನೀಟ್ ಪ್ರಶ್ನೆ ಪತ್ರಿಕೆ ಅಕ್ರಮಕ್ಕೆ ಸಾಲು ಸಾಲು ವಿದ್ಯಾರ್ಥಿಗಳು ಬಲಿ: ಮೂವರು ನೀಟ್...

BIG NEWS: ನೀಟ್ ಪ್ರಶ್ನೆ ಪತ್ರಿಕೆ ಅಕ್ರಮಕ್ಕೆ ಸಾಲು ಸಾಲು ವಿದ್ಯಾರ್ಥಿಗಳು ಬಲಿ: ಮೂವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆ

ನವದೆಹಲಿ: ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಅಕ್ರಮಕ್ಕೆ ಸಾಲು ಸಾಲು ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ. ಉತ್ತರ ಪ್ರದೇಶ, ದೆಹಲಿ, ರಾಜಸ್ಥಾನಗಳಲ್ಲಿ ಮೂವರು ನೀಟ್ ಆಕಾಂಕ್ಷಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ನೀಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ಆತಂಕಕ್ಕೊಳಗಾದ ಅಭ್ಯರ್ಥಿಗಳು ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ. ಕೇಂದ್ರ ಸರ್ಕಾರ ಜೂನ್ 21ರಂದು ನೀಟ್ ಮರು ಪರೀಕ್ಷೆ ದಿನಾಂಕ ನಿಗದಿ ಮಾಡಿದರೂ ಕೂಡ ಮತ್ತೆ ಪರೀಕ್ಷೆ ಬರೆದು ನಿರೀಕ್ಷೆಯಂತೆ ಅಂಕಗಳನ್ನು ಪಡೆದು ವೈದ್ಯಕೀಯ ಸೀಟ್ ಪಡೆಯಲು ಸಾಧ್ಯವಾಗದಿರಬಹುದು, ಈಗಾಗಲೇ ಎರಡು ಮೂರು ಬಾರಿ ನೀಟ್ ಪರೀಕ್ಷೆ ಬರೆದು ಕೊನೇ ಯತ್ನದಲ್ಲಿರುವ ನೀಟ್ ಆಕಾಂಕ್ಷಿಗಳು ಟೆನ್ಶನ್ ನಿಂದಾಗಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ನೀಟ್ ಆಕಾಂಕ್ಷಿ 21 ವರ್ಷದ ರಿತಿಕ್ ಮಿಶ್ರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಲಖೀಂಪುರ ಬೀದಿಯ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವರ್ಷ ಮೂರನೇ ಬಾರಿಗೆ ರಿತಿಕ್ ನೀಟ್ ಪರೀಕ್ಷೆ ಬರೆದಿದ್ದರು. ಈ ಬಾರಿ ಪಾಸ್ ಆಗಿ ತಾನು ವೈದ್ಯನಾಗುವ ವಿಶ್ವಾಸದಲ್ಲಿದ್ದರು. ಆದರೆ ನೀಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ನೇಣಿಗೆ ಶರಣಾಗಿದ್ದಾರೆ. ಮಗನ ಸಾವಿಗೆ ತಂದೆ ಅನೂಪ್ ಮಿಶ್ರಾ ಕಣ್ಣೀರಿಟ್ಟಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೀಟ್ ಆಕಾಂಕ್ಷಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ದೆಹಲಿಯ ಆದರ್ಶ್ ನಗರದಲ್ಲಿ ವಿದ್ಯಾರ್ಥಿನಿ ಅನಿಕಾ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅನಿಕಾ 2024, 2025, 2026ರಲ್ಲಿ ನೀಟ್ ಪರೀಕ್ಷೆ ಬರೆದಿದ್ದರು. ಆದರೆ ಈಗ ಏಕಾಏಕಿ ಮನೆಯಲ್ಲಿಯೇ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಮರಣೋತ್ತರ ಪರೀಕ್ಷೆಯನ್ನೂ ನಡೆಸದೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗಿದ್ದು, ಸಾಅಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಇನ್ನೊಂದೆಡೆ ರಾಜಸ್ಥಾನದಲ್ಲಿ ನೋಟ್ ಆಕಾಂಕ್ಷಿಯ ಮೊದಲ ಬಲಿಯಾಗಿದೆ. ನೀಟ್ ಆಕಾಂಕ್ಷಿ ಪ್ರದೀಪ್ ಮಹೀಚ್ ಎಂಬಾತ ಜುಂಜುನು ಜಿಲ್ಲೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಗೈದ್ದಾರೆ.

ಈ ಬಾರಿ ನೀಟ್ ನಲ್ಲಿ 650 ಅಂಕಗಳನ್ನು ಪಡೆಯುವ ನಿರೀಕ್ಷೆಯಲ್ಲಿ ಪ್ರದೀಪ್ ಇದ್ದರು. ಆದರೆ ಬರೆದ ಪರೀಕ್ಷೆ ರದ್ದಾದ ಬೆನ್ನಲ್ಲೇ ಆಘಾತಕ್ಕೊಳಗಾದ ಪ್ರದೀಪ್, ಮರು ಪರೀಕ್ಷೆ ನಿಗದಿಯಾಗಿದ್ದರೂ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular