HomeLatest Newsವೈದ್ಯಕೀಯ, ಆಯುಷ್ ಕೋರ್ಸ್ ಗೆ ಮುಂದುವರೆದ ಸುತ್ತಿನ ಸೀಟು ಹಂಚಿಕೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ವೈದ್ಯಕೀಯ, ಆಯುಷ್ ಕೋರ್ಸ್ ಗೆ ಮುಂದುವರೆದ ಸುತ್ತಿನ ಸೀಟು ಹಂಚಿಕೆ: ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಯುಜಿ ನೀಟ್ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಪದವಿ ಕೋರ್ಸ್‌ ಗಳ ಮುಂದುವರಿದ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭಿಸಿದ್ದು, ಅಭ್ಯರ್ಥಿಗಳು ತಮ್ಮ ಇಚ್ಛೆ/ಆಯ್ಕೆಗಳನ್ನು ಮರುಕ್ರಮಗೊಳಿಸಲು ಸೆ.17 ಮತ್ತು 18ರಂದು ಅವಕಾಶ ನೀಡಲಾಗಿದೆ.

400 ವೈದ್ಯಕೀಯ ಸೀಟು ಹೆಚ್ಚುವರಿಯಾಗಿ ಲಭ್ಯವಾಗಿರುವ ಹಾಗೂ ಮೈಸೂರಿನ ಫಾರೂಕ್ ವೈದ್ಯಕೀಯ ಕಾಲೇಜು ಹೊಸದಾಗಿ ಆರಂಭವಾಗುತ್ತಿರುವ ಕಾರಣ ಇಚ್ಛೆ/ಆಯ್ಕೆಗಳನ್ನು ಮರುಕ್ರಮಗೊಳಿಸಲು ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ತಮ್ಮ ಪೋಷಕರ ಜತೆ ಚರ್ಚೆ ನಡೆಸಿ, ತಮಗೆ ಸೂಕ್ತ ಅನ್ನಿಸುವ ಹಾಗೂ ಶುಲ್ಕ ಕಟ್ಟಲು ಸಾಧ್ಯವಾಗುವಂತಹ ಕಾಲೇಜುಗಳನ್ನೇ ಇಚ್ಛೆ/ಆಯ್ಕೆಗಳನ್ನು ದಾಖಲು ಮಾಡುವ ಸಂದರ್ಭದಲ್ಲಿ ಪರಿಗಣಿಸಬೇಕು. ಏಕೆಂದರೆ ಈ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಪ್ರವೇಶ ಪಡೆಯುವುದು ಕಡ್ಡಾಯವಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಆಸಕ್ತಿ ಇರುವ ಹಾಗೂ ಒಂದು ಲಕ್ಷ ರೂಪಾಯಿ ಕಾಷನ್ ಡೆಪಾಸಿಟ್ ಕಟ್ಟಿದ್ದರೂ ಈ ಹಿಂದಿನ ಸುತ್ತಿನಲ್ಲಿ ಎಂಜಿನಿಯರಿಂಗ್ ಇತ್ಯಾದಿ ಕೋರ್ಸ್ ಗಳಿಗೆ ಸೀಟು ಹಂಚಿಕೆಯಾಗಿ ಪ್ರವೇಶ ಪಡೆದವರಿಗೂ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಈ ಸುತ್ತಿನಲ್ಲಿ ಅವಕಾಶ ನೀಡಲಾಗುವುದು. ಅಂತಹವರು ಕಾಷನ್ ಡೆಪಾಸಿಟ್ ಕಟ್ಟಿ ಪುನಃ ಇಚ್ಛೆಗಳನ್ನು ಮರುವಿಂಗಡಣೆ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular