HomeLatest NewsBIG NEWS: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐ ಅಧಿಕಾರಿಗಳಿಂದ ಮತ್ತೋರ್ವ ಮಾಸ್ಟರ್ ಮೈಂಡ್...

BIG NEWS: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಸಿಬಿಐ ಅಧಿಕಾರಿಗಳಿಂದ ಮತ್ತೋರ್ವ ಮಾಸ್ಟರ್ ಮೈಂಡ್ ಶಿಕ್ಷಕಿ ಅರೆಸ್ಟ್

ಪುಣೆ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮತ್ತೋರ್ವ ಮಾಸ್ಟರ್ ಮೈಂಡ್ ಶಿಕ್ಷಕಿಯನ್ನು ಬಂಧಿಸಿದೆ.

ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ 2026ರ ಬಯಾಲಜಿ (ಜೀವಶಾಸ್ತ್ರ) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು ಮಹಾರಾಷ್ಟ್ರದ ಪುಣೆಯ ಹಿರಿಯ ಸಸ್ಯಶಾಸ್ತ್ರ ಶಿಕ್ಷಕಿ ಮನೀಷಾ ಗುರುನಾಥ್ ಮಂಢಾರೆ ಎಂಬಾಕೆಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನಿಷಾ ಮಂಢಾರೆಯನ್ನು ತೀವ್ರ ವಿಚಾರಣೆ ನಡೆಸಿದ ಬಳಿಕ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮನೀಷಾ ಮಂಢಾರೆ ಅವರನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ನೀಟ್ ಪರೀಕ್ಷಾ ಪ್ರಕ್ರಿಯೆಯ ತಜ್ಞರನ್ನಾಗಿ ನೇಮಿಸಿತ್ತು. ಮನಿಷಾಗೆ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ ಪ್ರಶ್ನೆ ಪತ್ರಿಕೆಗಳನ್ನು ನೋಡುವ ಸಂಪೂರ್ಣ ಅವಕಾಶವಿತ್ತು. ಇದರ ದುರುಪಯೋಗ ಪಡಿಸಿಕೊಂಡು ಈ ಹಿಂದೆ ಮೇ 14ರಂದು ಬಂಧಿತಳಾಗಿದ್ದ ಮನೀಷಾ ವಾಗ್ಮಾರೆ ಮೂಲಕ ನೀಟ್ ಅಭ್ಯರ್ಥಿಗಳನ್ನು ಸಂಪರ್ಕಿಸಿದ್ದಾಳೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಮನಿಷಾ ಮಂಢಾರೆ ಏಪ್ರಿಲ್ 2026 ರ ಅವಧಿಯಲ್ಲಿ ಪುಣೆಯ ತನ್ನ ನಿವಾಸದಲ್ಲಿ ಆಯ್ಕೆಯಾದ ಕೆಲವು ವಿದ್ಯಾರ್ಥಿಗಳಿಗೆ ವಿಶೇಷ ಕೋಚಿಂಗ್ ತರಗತಿಗಳನ್ನು ನಡೆಸಿದ್ದಾಳೆ. ಈ ತರಗತಿಗಳಲ್ಲಿ ಆಕೆ ನೀಟ್ ಪರೀಕ್ಷೆಗೆ ಬರಲಿದ್ದ ಬಯಾಲಜಿ ಪ್ರಶ್ನೆಗಳನ್ನು ಮುಂಚಿತವಾಗಿಯೇ ಬಹಿರಂಗಪಡಿಸಿ, ವಿದ್ಯಾರ್ಥಿಗಳ ನೋಟ್‌ಬುಕ್ ಮತ್ತು ಪಠ್ಯಪುಸ್ತಕಗಳಲ್ಲಿ ಗುರುತು ಮಾಡಿಸಿದ್ದಾಳೆ. ಮೇ 3 ರಂದು ನಡೆದ ನಿಜವಾದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗೆ ಈ ಪ್ರಶ್ನೆಗಳು ಸಂಪೂರ್ಣವಾಗಿ ತಾಳೆಯಾಗಿರುವುದು ಸಿಬಿಐ ತನಿಖೆಯಲ್ಲಿ ದೃಢಪಟ್ಟಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಿಬಿಐ ದೇಶದ 6 ಪ್ರಮುಖ ಸ್ಥಳಗಳಲ್ಲಿ ದಾಳಿ ನಡೆಸಿ,ಈವರೆಗೆ ದೆಹಲಿ, ಜೈಪುರ, ಗುರುಗ್ರಾಮ, ನಾಸಿಕ್, ಪುಣೆ ಮತ್ತು ಅಹ್ಲಿಯಾನಗರದಿಂದ ಒಟ್ಟು 9 ಆರೋಪಿಗಳನ್ನು ಬಂಧಿಸಿದೆ. ಅಲ್ಲದೇ ಪ್ರಕರಣ ಸಂಬಂಧ ಲ್ಯಾಪ್‌ಟಾಪ್‌ಗಳು, ಬ್ಯಾಂಕ್ ಸ್ಟೇಟ್‌ಮೆಂಟ್‌ಗಳು, ಮೊಬೈಲ್ ಫೋನ್‌ಗಳು ಮತ್ತು ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular