HomeLatest Newsವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಡಿ ಕೆ ಶಿವಕುಮಾರ್

ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಡಿ ಕೆ ಶಿವಕುಮಾರ್

ಬೆಂಗಳೂರು-“ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು ಕೇಳಿದಾಗ, “ಈಗ ಇಡೀ ದೇಶವೇ ಎಚ್ಚೆತ್ತುಕೊಂಡಿದೆ. ನಾವೆಲ್ಲರೂ ಈ ದೇಶದ ವಿದ್ಯಾರ್ಥಿ, ಯುವ ಜನರ ಭವಿಷ್ಯಕ್ಕಾಗಿ ಕೆಲಸ ಮಾಡುತ್ತಿದ್ದೇವೆ” ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಮಿಳುನಾಡು ಸಿಎಂ ಪತ್ರ: ಸಹಕಾರಕ್ಕೆ ಸಿದ್ಧ

ತಮಿಳುನಾಡು ಸಿಎಂ ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ನಾನು ಈಗ ಅದನ್ನು ಬಹಿರಂಗಪಡಿಸಲು ಬಯಸುವುದಿಲ್ಲ. ಈ ವಾರ ಸಚಿವ ಸಂಪುಟ ವಿಸ್ತರಣೆ ಮತ್ತು ಇತರೇ ವಿಷಯಗಳ ಕಾರ್ಯನಿರತವಾಗಿದ್ದೇವೆ. ಕೆಲವು ವಿಚಾರಗಳಲ್ಲಿ ನಾವು ಎಲ್ಲರೊಂದಿಗೆ ಮಾತನಾಡಲು, ಎಲ್ಲರೊಂದಿಗೆ ಹಂಚಿಕೊಳ್ಳಲು, ಎಲ್ಲರೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ” ಎಂದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular