HomeLive Newsವಾರಾಂತ್ಯದವರೆಗೆ ಎಲ್ಲಾ ಮದ್ಯದಂಗಡಿಗಳು ರಾತ್ರಿ 8 ಗಂಟೆಯೊಳಗೆ ಬಂದ್: ದೆಹಲಿ ಸರ್ಕಾರ ಆದೇಶ

ವಾರಾಂತ್ಯದವರೆಗೆ ಎಲ್ಲಾ ಮದ್ಯದಂಗಡಿಗಳು ರಾತ್ರಿ 8 ಗಂಟೆಯೊಳಗೆ ಬಂದ್: ದೆಹಲಿ ಸರ್ಕಾರ ಆದೇಶ

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ವಿರೋಧಿಸಿ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ವಾರಾಂತ್ಯದವರೆಗೆ ಎಲ್ಲಾ ಮದ್ಯದಂಗಡಿಗಳನ್ನು ರಾತ್ರಿ 8 ಗಂಟೆಯೊಳಗೆ ಬಂದ್ ಮಾಡುವಂತೆ ದೆಹಲಿ ಸರ್ಕಾರ ಆದೇಶಿಸಿದೆ.

ಸಾಮಾನ್ಯವಾಗಿ ದೆಹಲಿಯ ಮದ್ಯದಂಗಡಿಗಳು ರಾತ್ರಿ 10 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತವೆ. ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ದೆಹಲಿ ಪೊಲೀಸರ ಸಲಹೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕಳೆದ ಹಲವು ದಿನಗಳಿಂದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಅದರ ವಿರುದ್ಧ ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಭಾಗವಹಿಸಿರುವ ವಿದ್ಯಾರ್ಥಿಗಳು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular