HomeLatest NewsNEET ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ; ಮೋದಿ ಅಭಿನಂದನೆ

NEET ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಅಂಗೀಕಾರ; ಮೋದಿ ಅಭಿನಂದನೆ

ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ಮಸೂದೆ ಅಂಗೀಕಾರಗೊಂಡ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಸಂದೇಶ ಹಂಚಿಕೊಳ್ಳುವ ಮೂಲಕ ದೇಶದ ವಿದ್ಯಾರ್ಥಿಗಳಿಗೆ ಅಭಯ ನೀಡಿದ್ದಾರೆ. ವಾರದಲ್ಲಿ ಪ್ರಕಟವಾಗಿರುವ ಅವರ 4ನೇ ಸೆಲ್ಫಿ ವಿಡಿಯೋ ಇದಾಗಿದ್ದು, ಪರೀಕ್ಷಾ ಅಕ್ರಮ ಎಸಗುವ ಮಾಫಿಯಾಗಳಿಗೆ ಕಠಿಣ ಎಚ್ಚರಿಕೆ ರವಾನಿಸಿದ್ದಾರೆ.

ಸಂಸತ್ತಿನ ಎರಡೂ ಸದನಗಳಲ್ಲಿ ವಿಧೇಯಕ ಅಂಗೀಕಾರಗೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸಿರುವ ಪ್ರಧಾನಿ, ಇನ್ಮುಂದೆ ದೇಶದಲ್ಲಿ ಅತ್ಯಂತ ವಿಶ್ವಾಸಾರ್ಹ ಹಾಗೂ ಪಾರದರ್ಶಕ ಪರೀಕ್ಷಾ ಪದ್ಧತಿ ಜಾರಿಗೆ ಬರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಡಿಯೋ ಸಂದೇಶದಲ್ಲಿ ಪರೀಕ್ಷಾ ಅಕ್ರಮಗಳ ವಿರುದ್ಧ ಗುಡುಗಿರುವ ಪ್ರಧಾನಿ ಮೋದಿ, “ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳಲ್ಲಿ ಭಾಗಿಯಾಗುವ ಯಾವುದೇ ಮಾಫಿಯಾ, ಗ್ಯಾಂಗ್ ಅಥವಾ ದೇಶದ ಮಕ್ಕಳ ಭವಿಷ್ಯದ ಜೊತೆ ಆಟವಾಡುವವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಶಕಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪ್ರಶ್ನೆಪತ್ರಿಕೆ ಸೋರಿಕೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಲಕ್ಷಾಂತರ ಯುವಕರ ವೃತ್ತಿಜೀವನದ ಮೇಲೆ ಹೊಡೆತ ನೀಡಿದೆ. ಇದನ್ನು ತಡೆಯಲು ಪ್ರಕರಣಗಳ ಶೀಘ್ರ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸಲಾಗುವುದು ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಆಧುನಿಕ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಗುವುದು ಎಂದು ಪ್ರಧಾನಿ ತಿಳಿಸಿದ್ದಾರೆ.

https://x.com/narendramodi/status/2082877914035753239

ಕಟ್ಟುನಿಟ್ಟಿನ ಬಿಲ್‌ಗೆ ಸಂಸತ್ ಅಸ್ತು

ಲೋಕಸಭೆಯಲ್ಲಿ ಬುಧವಾರ ಅಂಗೀಕಾರಗೊಂಡಿದ್ದ ಪ್ರಶ್ನೆಪತ್ರಿಕೆ ಸೋರಿಕೆ ತಡೆ ತಿದ್ದುಪಡಿ ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯೂ ಅನುಮೋದನೆ ನೀಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಅಂಕಿತ ಬಿದ್ದ ತಕ್ಷಣ ಇದು ದೇಶಾದ್ಯಂತ ಕಾಯಿದೆಯಾಗಿ ಜಾರಿಗೆ ಬರಲಿದೆ. ನೀಟ್ (NEET) ಪರೀಕ್ಷೆ ಸೋರಿಕೆ ವಿವಾದ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ದಿಟ್ಟ ಹೆಜ್ಜೆ ಇಟ್ಟಿದೆ. ವಿಧೇಯಕ ಜಾರಿಯ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ.

ಫ್ರೆಂಡ್ಸ್ ಬದಲಿಗೆ ಸಾಥಿಯೋಂ: ಜೆನ್ ಝೀ ಗಮನ ಸೆಳೆದ ಪ್ರಧಾನಿ

ಯುವಜನತೆ ಮತ್ತು ಜೆನ್ ಝೀ ತಲೆಮಾರನ್ನು ತಲುಪುವ ಉದ್ದೇಶದಿಂದ ಪ್ರಧಾನಿ ಮೋದಿ ಅವರು ಸತತವಾಗಿ ಇನ್‌ಸ್ಟಾಗ್ರಾಮ್ ಸೆಲ್ಫಿ ವಿಡಿಯೋಗಳ ಮೂಲಕ ಸಂವಹನ ನಡೆಸುತ್ತಿದ್ದಾರೆ. ವಿಶೇಷವೆಂದರೆ, ಹಿಂದಿನ ಮೂರು ವಿಡಿಯೋಗಳಲ್ಲಿ ವಿದ್ಯಾರ್ಥಿಗಳನ್ನು ಫ್ರೆಂಡ್ಸ್ ಎಂದು ಸಂಭೋದಿಸಿದ್ದ ಪ್ರಧಾನಿ, ಈ 4ನೇ ವಿಡಿಯೋದಲ್ಲಿ ‘ಸಾಥಿಯೋಂ’ (ಸ್ನೇಹಿತರೇ/ಸಹಪಯಣಿಗರೇ) ಎಂದು ಕರೆಯುವ ಮೂಲಕ ನೆಟ್ಟಿಗರ ಗಮನ ಸೆಳೆದಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular