HomeLatest Newsನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ವಿನೀತ್ ಜೋಶಿ ವಜಾ:...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ವಿನೀತ್ ಜೋಶಿ ವಜಾ: ನೂತನ ಕಾರ್ಯದರ್ಶಿ ನೇಮಕ

ನವದೆಹಲಿ: ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಅಬ್ಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯಾಗಿದ್ದ ವಿನೀತ್ ಜೋಶಿ ಅವರನ್ನು ವಜಾಗೊಳಿಸಿದ್ದು, ನೂತನ ಕಾರ್ಯದರ್ಶಿಯನ್ನು ನೇಮಕ ಮಾಡಿದೆ.

ವಜಾಗೊಂಡಿರುವ ವಿನೀಶ್ ಜೋಶಿ ಸ್ಥಾನಕ್ಕೆ ಐಎ ಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೂತನ ಉನ್ನತ ಶಿಕ್ಷಣ ಕಾರ್ಯದರ್ಶಿಯಾಗಿ ನೇಮಿಸಿ ತಡರಾತ್ರಿ ಆದೇಶ ಹೊರಡಿಸಸಿದೆ.

ನರೇಶ್ ಪಾಲ್ ಗಂಗ್ವಾರ್ ಅವರು 1994 ರ ರಾಜಸ್ಥಾನ ಕೇಡರ್‌ನ ಭಾರತೀಯ ಆಡಳಿತ ಸೇವೆ (IAS) ಅಧಿಕಾರಿಯಾಗಿದ್ದಾರೆ. ಈ ಹಿಂದೆ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ಕಾರ್ಯದರ್ಶಿಯಾಗಿ ಹಾಗೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ರಾಜಸ್ಥಾನ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿಯೂ ಅವರು ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 1992 ರ ಮಣಿಪುರ ಕೇಡರ್ ಅಧಿಕಾರಿಯಾದ ವಿನೀತ್ ಜೋಶಿ ಅವರನ್ನು ಉನ್ನತ ಶಿಕ್ಷಣ ಇಲಾಖೆಯಿಂದ ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸರ್ಕಾರದ ಈ ನಿರ್ಣಾಯಕ ನಿರ್ಧಾರವನ್ನು ಸ್ವಾಗತಿಸಿರುವ ಬಿಜೆಪಿ ಸಂಸದ ಡಾ. ನಿಶಿಕಾಂತ್ ದುಬೆ, ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ನಿರ್ಲಕ್ಷ್ಯ ವಹಿಸಿದ ಹಿರಿಯ ಅಧಿಕಾರಿಯನ್ನೇ ಪ್ರಧಾನಿ ಮೋದಿ ಹುದ್ದೆಯಿಂದ ತೆಗೆದುಹಾಕಿದ್ದಾರೆ. ಇದು ‘ಮೋದಿ ಗ್ಯಾರಂಟಿ’. ಪರೀಕ್ಷಾ ಅಕ್ರಮದಲ್ಲಿ ಯಾವುದೇ ಹಂತದ ಅಧಿಕಾರಿಯ ನಿರ್ಲಕ್ಷ್ಯವಿದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ನೀಟ್ ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ಜೂನ್ 20 ರಿಂದ ಜಂತರ್ ಮಂತರ್‌ನಲ್ಲಿ ಧರಣಿ ಆರಂಭಿಸಿತು. ಸೋನಮ್ ವಾಂಗ್ಚುಕ್ ಜೂನ್ 28 ರಂದು ಪ್ರತಿಭಟನೆಗೆ ಬೆಂಬಲ ಸೂಚಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ದೇಶಾದ್ಯಂತ ಪ್ರತಿಭಟನೆಗಳು ಪ್ರಾರಂಭವಾಗಿತ್ತು. ಈ ಬೆಳವಣಿಗೆಗಳ ನಡುವೆ ಸೋನಮ್ ವಾಂಗ್ಚುಕ್ ಅವರನ್ನು ಖುದ್ದಾಗಿ ಕೇಂದ್ರ ಸಚಿವರು ಭೇಟಿಯಾಗಿ ಭರವಸೆಗಳನ್ನು ನೀಡಿದ್ದಾರೆ. ಸರ್ಕಾರದ ಭರವಸೆಗಳ ಬೆನ್ನಲ್ಲೇ ಕೇಂದ್ರ ಸರ್ಕಾರ ಹಿರಿಯ ಅಧಿಕಾರಿಗಳನ್ನು ಬದಲಾಯಿಸುವ ಮೂಲಕ ಮಹತ್ವದ ನಿರ್ಧಾರ ಕೈಗೊಂಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular