HomeLive Newsವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಪೆಲೆಟ್ ಗನ್ ಗಳಿಂದ ದಾಳಿ: ವಿದ್ಯಾರ್ಥಿಯ ಮೈಮೇಲಿನ ಗಾಯಗಳನ್ನು ತೋರಿಸಿ ಧರ್ಮೇಂದ್ರ...

ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಪೆಲೆಟ್ ಗನ್ ಗಳಿಂದ ದಾಳಿ: ವಿದ್ಯಾರ್ಥಿಯ ಮೈಮೇಲಿನ ಗಾಯಗಳನ್ನು ತೋರಿಸಿ ಧರ್ಮೇಂದ್ರ ಪ್ರಧಾನ್ ಕ್ರಿಮಿನಲ್ ಶಿಕ್ಷಣ ಸಚಿವ ಎಂದು ಕಿಡಿಕಾರಿದ ರಾಹುಲ್ ಗಾಂಧಿ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೆಹಲಿ ಪೊಲೀಸರು ದೌರ್ಜನ್ಯಗಳನ್ನು ನಡೆಸಿದ್ದಾರೆ. ಪೆಲೆಟ್ ಗನ್ ಗಳಿಂದ ದಾಳಿ ನಡೆಸಿದ್ದಾರೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿಯಲ್ಲಿ ಪೆಲೆಟ್ ಗ ಗಳಿಂದ ದಾಳಿಗೊಳದಾಗ ವಿದ್ಯಾರ್ಥಿ ಜೊತೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಧರ್ಮೇಂದ್ರ ಪ್ರಧಾನ್ ಒಬ್ಬ ಕ್ರಿಮಿನಲ್ ಶಿಕ್ಷಣ ಸಚಿವ. ಸಾವಿರಾರು ವಿದ್ಯಾರ್ಥಿಗಳು ಇಂದು ಬೀದಿಯಲ್ಲಿ ನಿಂತು ಹೋರಾಟ ನಡೆಸುತ್ತಿದ್ದಾರೆ. ಅವರ ಮೇಲೆ ಅಮಾನವೀಯವಾಗಿ ಪೊಲೀಸರಿಂದ ಲಾಠಿ ಚಾರ್ಜ್, ಪೆಲೆಟ್ ಗನ್ ದಾಳಿ ನಡೆಸಲಾಗಿದೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ. ವಿದ್ಯಾರ್ಥಿಗಳ ಮೇಲೆ ಹಲ್ಲೆ, ಧಮ್ಕಿ ಹಾಕುವುದನ್ನು ಕೂಡಲೇ ನಿಲ್ಲಿಸಬೇಕು. ವಿದ್ಯಾರ್ಥಿಗಳ ಎಲ್ಲ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ದೆಹಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್‌ಗಳಿಂದ ದಾಳಿ ಮಾಡಿದ್ದಾರೆ. ಇದೇ ವೇಳೆ ಪಕ್ಕದಲ್ಲಿದ್ದ ಗಾಯಾಳು ವಿದ್ಯಾರ್ಥಿಯ ಮೈಮೇಮಿನ ಗಾಯಗಳನ್ನು ರಾಹುಲ್ ಗಾಂಧಿ ತೋರಿಸಿದರು. ವಿದ್ಯಾರ್ಥಿ ದೇಹದ ತುಂಬೆಲ್ಲಾ ಗಾಯಗಳಾಗಿವೆ. ಆತನ ಕಣ್ಣು ಕೂಡ ಹಾನಿಯಾಗಿದೆ. ಮತ್ತೋರ್ವ ವಿದ್ಯಾಅರ್ಥಿಯ ದೇಹದಲ್ಲಿ ಇನ್ನೂ ಪೆಲೆಟ್ ಗನ್ ಗುಂಡುಗಳು ಇವೆ. ಆತನ ಬೆಡ್ ಮೇಲೆ ಮಲಗಿ ನರಳುತ್ತಿದ್ದಾನೆ. ದೆಹಲಿ ಪೊಲೀಸರು ವಿದ್ಯಾರ್ಥಿಗಳ ಜೊತೆ ಅಮಾನವೀಯವಾಗಿ ನಡೆದುಕೊಂಡಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆಚ್ ದೌರ್ಜನ್ಯ ನಡೆಸಿದ್ದಾರೆ. ಈ ಘಟನೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular