HomeKarnatakaಪಿಜಿ ದಂತ ವೈದ್ಯಕೀಯ ಕೋರ್ಸ್ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಪಿಜಿ ದಂತ ವೈದ್ಯಕೀಯ ಕೋರ್ಸ್ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: NEET-MDS-26: ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು‌ ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.

ಒಟ್ಟು 900 ಸ್ನಾತಕೋತ್ತರ ದಂತ ವೈದ್ಯಕೀಯ ಸೀಟುಗಳ ಪೈಕಿ ಮೊದಲ ಸುತ್ತಿನಲ್ಲೇ 858 ಸೀಟು ಹಂಚಿಕೆಯಾಗಿವೆ.

ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಸೆ.14ರೊಳಗೆ ಚಾಯ್ಸ್ ಆಯ್ಕೆ ಮಾಡಿಕೊಳ್ಳಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಯ್ಸ್- 1 ಮತ್ತು ಚಾಯ್ಸ್- 2 ಆಯ್ಕೆ ಮಾಡಿದ ಅಭ್ಯರ್ಥಿಗಳು ಸೆ.15ರಿಂದ 16ರೊಳಗೆ ಶುಲ್ಕ ಪಾವತಿಸಬೇಕು. ಚಾಯ್ಸ್- 1 ಆಯ್ಕೆ ಮಾಡಿದ ಅಭ್ಯರ್ಥಿಗಳು ಸೆ.15ರಿಂದ 17ರವರೆಗೆ #KEA ಕಚೇರಿಯಲ್ಲಿ ಕಚೇರಿಯಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸಬೇಕು.

ಚಾಯ್ಸ್-1 ಆಯ್ಕೆ ಮಾಡಿದ ಅಭ್ಯರ್ಥಿಗಳು ಸೆ.18ರೊಳಗೆ ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

CAR/DAR ಪೊಲೀಸ್ ನೇಮಕಾತಿ ಪರೀಕ್ಷೆ ಮುಗಿದ ಕೇವಲ 5 ದಿನದಲ್ಲೇ ಫಲಿತಾಂಶ ಪ್ರಕಟ

ಬೆಂಗಳೂರು: ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/ DAR) ಹುದ್ದೆಗಳಿಗೆ ಸೆ.6ರಂದು ನಡೆದ ಲಿಖಿತ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರಕಟಿಸಿದೆ.

ದಾಖಲೆ ಅವಧಿ ಅಂದರೆ ಪರೀಕ್ಷೆ ನಡೆದು ಕೇವಲ ಐದು ದಿನಗಳಲ್ಲಿಯೇ ಫಲಿತಾಂಶ ಪ್ರಕಟಿಸಿದೆ.

ಫಲಿತಾಂಶಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಸೆ.14ರಂದು ಸಂಜೆ‌ 5.30ರೊಳಗೆ ನಿಗದಿತ ಲಿಂಕ್ (https://cetonline.Karnataka.in/kea/) ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದು.

ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಸೆ.10ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಫಲಿತಾಂಶ ಪ್ರಕಟ

ಪೊಲೀಸ್‌ ಇಲಾಖೆಯಿಂದ ಅಧಿಸೂಚಿಸಲಾದ ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ ಟೇಬಲ್ (CAR/DAR) ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರಿದಂದ ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/DAR) ನೇಮಕಾತಿ ಸಂಬಂಧ ದಿನಾಂಕ 06.09.2026 ರಂದು ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ದಿನಾಂಕ 07.09.2026 ರಂದು ಪ್ರಕಟಿಸಿ ದಿನಾಂಕ 09.09.2026 ರ ಬೆಳಿಗ್ಗೆ 10.30 ರವರೆಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.

ಅದರಂತೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಮೂಲಕ ಪರಿಶೀಲಿಸಿ ದಿನಾಂಕ: 10.09.2026 ರಂದು ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿರುತ್ತದೆ.

ಪರಿಷ್ಕೃತ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ 14.09.2026 ದಿನಾಂಕ ಸಂಜೆ 5.30 ರೊಳಗೆ ನಿಗದಿತ (https://cetonline.karnataka.gov.in/kea/) ថ ថថ ม . ಲಿಂಕ್ ದಾಖಲೆಗಳಿಲ್ಲದ ಹಾಗೂ ಕೀ ಉತ್ತರಗಳಿಗೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಈ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular