HomeLatest NewsNEET ಪರೀಕ್ಷಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 15 ನಿಮಿಷ ಹೆಚ್ಚುವರಿ ಸಮಯಾವಕಾಶ ನೀಡಿದ NTA

NEET ಪರೀಕ್ಷಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 15 ನಿಮಿಷ ಹೆಚ್ಚುವರಿ ಸಮಯಾವಕಾಶ ನೀಡಿದ NTA

ನವದೆಹಲಿ: ಇಂದು ದೇಶಾದ್ಯಂತ ನೀಟ್-ಯುಜಿ ಮರು ಪರೀಕ್ಷೆ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಪರೀಕ್ಷೆ ಆರಂಭವಾಗಲಿದೆ. ಈ ನಡುವೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.

ನೀಟ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು 15 ನಿಮಿಷ ಹೆಚ್ಚುವರಿ ಸಮಯಾವಕಾಶವನ್ನು ನೀಡಲಾಗಿದೆ. ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿರುವ ನೀಟ್ ಪರೀಕ್ಷೆ ಸಂಜೆ 5:15ಕ್ಕೆ ಮುಗಿಯಲಿದೆ. 15 ನಿಮಿಷ ಹೆಚ್ಚುವರಿ ಕಾಲಾವಕಾಶ ನೀಡಲಾಗುತ್ತಿದೆ ಎಂದು ಎನ್ ಟಿಎ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ, ಯಾವುದೇ ಲೋಪಗಳಿಲ್ಲದೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಎನ್ ಟಿಎ ಮತ್ತು ಸ್ಥಳೀಯ ಆಡಳಿತಗಳು ವ್ಯಾಪಕ ಸಿದ್ಧತೆಗಳನ್ನು ಮಾಡಿಕೊಂಡಿವೆ. ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಕಲಬುರಗಿಯಲ್ಲಿ 20 ಪರೀಕ್ಷಾ ಕೇಂದ್ರಗಳನ್ನು ನಿಯೋಜಿಸಲಾಗಿದ್ದು, ನಗರದಲ್ಲಿ 16 ಮತ್ತು ಆಳಂದ್ ತಾಲೂಕಿನ ಕಡಗಂಚಿಯಲ್ಲಿ 4 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರಿ ಪಿಯು ಕಾಲೇಜು ಸೇರಿದಂತೆ ಎಲ್ಲ ಕೇಂದ್ರಗಳಲ್ಲೂ ಬಿಗಿ ಭದ್ರತೆ ಒದಗಿಸಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಜೆರಾಕ್ಸ್ ಅಂಗಡಿಗಳು ಮತ್ತು ಪುಸ್ತಕದ ಅಂಗಡಿಗಳನ್ನು ಮುಚ್ಚಿಸಲಾಗಿದೆ.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಸೇರಿದಂತೆ ಹಲವು ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಎನ್‌ಟಿಎ ಈ ಬಾರಿ ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲೂ ಎರಡು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದೆ. ಕೇಂದ್ರಿಯ ಮೀಸಲು ಪೊಲೀಸ್ ಪಡೆ (CRPF) ಮತ್ತು ಸ್ಥಳೀಯ ಪೊಲೀಸರು ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ದೇಶಾದ್ಯಂತ 551 ನಗರಗಳಲ್ಲಿ ಮತ್ತು 14 ವಿದೇಶಿ ಕೇಂದ್ರಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಮರುಪರೀಕ್ಷೆ ಬರೆಯುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular