ಲಕ್ನೋ : ಸಹೋದರರು ಸ್ವಂತ ತಂಗಿಯ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್ ಮೇಲ್ ಮಾಡಿದ ಘಟನೆ ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದಿದೆ. ಸ್ವಂತ ಅಣ್ಣಂದಿರೇ ತಂಗಿಯ ಮೇಲೆ ಮುಗಿಬಿದ್ದಿದ್ದು, ನಿಜಕ್ಕೂ ಆಘಾತಕಾರಿಯಾಗಿದೆ.
ಕಳೆದ 1 ವರ್ಷದಿಂದ ಇಬ್ಬರು ಸಹೋದರು ಅಪ್ರಾಪ್ತ ಸಹೋದರಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಟ್ಟುಕೊಂಡು ಬ್ಲ್ಯಾಕ್ ಮೇಲೆ ಮಾಡಿರುವ ಆರೋಪ ಕೇಳಿಬಂದಿದೆ.
ಸೆ.18 ರಂದು ಸಂತ್ರಸ್ತೆಯ ಗೆಳೆಯ ಆಕೆಯನ್ನು ಭೇಟಿ ಮಾಡಿದಾಗ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆ ತನ್ನ ಸಹೋದರರ ವಿರುದ್ಧಅರ್ವಾಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಸದ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.