ನೇಹಾ ಕೊಲೆ ಪ್ರಕರಣ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ: ಅಪ್ರಾಪ್ತೆ ಗರ್ಭಿಣಿ ಮಾಡಿ ಅನ್ಯಕೋಮಿನ ಯುವಕ ಎಸ್ಕೇಪ್

ಹುಬ್ಬಳ್ಳಿ: ನೇಹಾ ಕೊಲೆ ಮಾಸುವ ಮೊದಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿ ಅನ್ಯಕೋಮಿನ ಯುವಕ ಎಸ್ಕೇಪ್ ಆಗಿದ್ದಾನೆ. ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೊಟ್ಟೆ ನೋವು ಹಿನ್ನೆಲೆ ಹುಡುಗಿಯನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ತಪಾಸಣೆ ವೇಳೆ ಅಪ್ರಾಪ್ತೆ ಗರ್ಭಿಣಿ ಆಗಿರುವುದು ದೃಢಪಟ್ಟಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಆರೋಪಿ ಯುವಕನ ವಿರುದ್ಧ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಆರೋಪಿ ಬಂಧನಕ್ಕೆ ಆಗ್ರಹಿಸಿ ನವನಗರ ಠಾಣೆ ಮುಂದೆ ಪ್ರತಿಭಟನೆ ನಡೆಸಲಾಗಿದೆ. ಯುವಕನ ವಿರುದ್ಧ ಅಪ್ರಾಪ್ತೆ ಪೋಷಕರು ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ದೂರು ದಾಖಲಾಗಿದೆ. ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ, ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು. ಎಫ್ಐಆರ್ ದಾಖಲಿಸಿ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read