ನೇಹಾ ನಿವಾಸಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ: ತಂದೆ, ತಾಯಿಗೆ ಸಾಂತ್ವನ

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ನೇಹಾ ಪೋಷಕರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸಚಿವರಾದ ಸಂತೋಷ್ ಲಾಡ್, ಹೆಚ್.ಕೆ. ಪಾಟೀಲ್, ಶಾಸಕರಾದ ಕೋನರೆಡ್ಡಿ, ಪ್ರಸಾದ್ ಅಬ್ಬಯ್ಯ ಸಾಥ್ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿಯಾಗಿರುವ ಎಂಸಿಎ ವಿದ್ಯಾರ್ಥಿನಿ ನೇಹಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಘಟನೆ ಬಗ್ಗೆ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ನಗರದ ಬಿಡನಾಳದಲ್ಲಿರುವ ನಿರಂಜನ ಹಿರೇಮಠ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ನೇಹಾ ಹತ್ಯೆ ಪ್ರಕರಣ, ಆರೋಪಿ ಬಂಧನ, ಪ್ರಕರಣದ ತನಿಖೆ ವಿಚಾರವಾಗಿ ಚರ್ಚಿಸಿದ್ದು ಸೂಕ್ತ ಕ್ರಮ ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read