BIG NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ನ್ಯಾಯಾಧೀಶರ ಸಮ್ಮುಖದಲ್ಲಿಯೇ ಆರೋಪಿಯ ರಕ್ತದ ಮಾದರಿ ಸಂಗ್ರಹಿಸಿದ ವೈದ್ಯರು

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯರು, ಆರೋಪಿ ಫಯಾಜ್ ನ ರಕ್ತದ ಮಾದರಿ ಸಂಗ್ರಹಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ, ಆರೋಪಿ ಫಯಾಜ್ ಡಿಎನ್ ಎ ಪರೀಕ್ಷೆ ನಡೆಸಲು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ 1ನೇ ಜೆ ಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರ ಸಮ್ಮುಖದಲ್ಲಿಯೇ ಆರೋಪಿ ಫಯಾಜ್ ನ ರಕ್ತದ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಸ್ಥಳ, ಚಾಕುವಿಗೆ ತಗುಲಿದ್ದ 2 ಮಾದರಿಯ ರಕ್ತದ ಗುರುತು, ಎರಡು ರಕ್ತದ ಮಾದರಿ ಯಾರದೆಂದು ಪರೀಕ್ಷಿಸಲು ಡಿಎನ್ ಎ ಟೆಸ್ಟ್ ಮಾಡುವ ನಿಟ್ಟಿನಲ್ಲಿ ಹಾಗೂ ಇತರ ಆಯಾಮಗಳಲ್ಲಿಯೂ ತನಿಖೆ ನಡೆಸುವ ದೃಷ್ಟಿಯಲ್ಲಿ ರಕ್ತದ ಮಾದರಿ ಸಂಗ್ರಹಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read