HomeKarnatakaBREAKING NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ; ಆರೋಪಿ ಸಿಐಡಿ ಕಸ್ಟಡಿಗೆ

BREAKING NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ; ಆರೋಪಿ ಸಿಐಡಿ ಕಸ್ಟಡಿಗೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನಿ ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ನೀಡಿದೆ.

ಹುಬ್ಬಳ್ಳಿ-ಧಾರವಾಡ ಒಂದನೇ ಜೆ ಎಂ ಎಫ್ ಸಿ ನ್ಯಾಯಾಲಯ ಆರೋಪಿ ಫಯಾಜ್ ನನ್ನು 6 ದಿನಗಳ ಕಾಲ ಸಿಐಡಿ ತನಿಖೆಗೆ ಒಪ್ಪಿಸಿ ಆದೇಶ ನೀಡಿದೆ.

ಕೆಲ ದಿನಗಳ ಹಿಂದೆ ಹುಬ್ಬಳ್ಳಿ-ಧಾರವಾಡ ಕಾರ್ಪೊರೇಟರ್ ನಿರಂಜನ ಹಿರೇಮಠ ಮಗಳು ನೇಹಾ ಹಿರೇಮಠಳನ್ನು ಬಿವಿಬಿ ಕಾಲೇಜು ಆವರಣದಲ್ಲಿಯೇ ದುಷ್ಕರ್ಮಿ ಫಯಾಜ್ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ. ಬಂಧಿತ ಆರೋಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿದೆ. ಈ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಆರೋಪಿಯನ್ನು ಕಸ್ಟಡಿಗೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular