HomeKarnatakaBIG NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಆರೋಪಿ ನ್ಯಾಯಾಂಗ ಬಂಧನಕ್ಕೆ; ಜೈಲು ಸೇರಿದ ಹಂತಕ

BIG NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಆರೋಪಿ ನ್ಯಾಯಾಂಗ ಬಂಧನಕ್ಕೆ; ಜೈಲು ಸೇರಿದ ಹಂತಕ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಾಯಾಜ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಆರೋಪಿ ಫಯಾಜ್ ನನ್ನು ವಿಚಾರಣೆಗಾಗಿ ಸಿಐಡಿ ಪೊಲೀಸರು 6 ದಿನಗಳ ಕಾಲ ಕಸ್ಟಡಿಗೆ ಪ್ಡೆದಿದ್ದರು. ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ 1ನೇ ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್ ಫಯಾಜ್ ಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಆರೋಪಿ ಫಯಾಜ್ ನನ್ನು ಪೊಲೀಸರು ಧಾರವಾಡದ ಸೆಂಟ್ರಲ್ ಜೈಲಿಗೆ ಕಳುಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಪ್ರಿಲ್ 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನೇಹಾ ಹಿರೇಮಠಳನ್ನು ಚಾಕುವಿನಿಂದ ಇರಿದು ಫಯಾಜ್ ಹತ್ಯೆ ಮಾಡಿದ್ದ. ಘಟನೆ ನಡೆದ ಒಂದು ಗಂಟೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular