HomeKarnatakaBIG NEWS: ನೇಹಾ ಹತ್ಯೆ ಪ್ರಕರಣ: ಅನುಮತಿ ನಿರಾಕರಿಸಿದರೂ ಬಿಜೆಪಿಯಿಂದ ಪ್ರತಿಭಟನೆ

BIG NEWS: ನೇಹಾ ಹತ್ಯೆ ಪ್ರಕರಣ: ಅನುಮತಿ ನಿರಾಕರಿಸಿದರೂ ಬಿಜೆಪಿಯಿಂದ ಪ್ರತಿಭಟನೆ

ಮೈಸೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ಖಂಡಿಸಿ ರಾಜ್ಯ ಬಿಜೆಪಿ ರಾಜ್ಯದ ಜಿಲ್ಲಾ ಕೇಂದ್ರದಗಳಲ್ಲಿ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಮೈಸೂರಿನಲ್ಲಿಯೂ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದೆ.

ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿಲ್ಲ. ಅನುಮತಿ ಇಲ್ಲದಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ.

ನೇಹಾ ಹತ್ಯೆ ಪ್ರಕರಣವನ್ನು ಖಂಡಿಸಿರುವ ಬಿಜೆಪಿ ಪ್ರತಿಭಟನಾ ನಿರತ ನಾಯಕರು, ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಬೆಳಗಾವಿ, ಹುಬ್ಬಳಿ, ಕಲಬುರ್ಗಿ ಜಿಲ್ಲೆಗಳಲ್ಲಿಯೂ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ತೀವ್ರಗೊಂಡಿದೆ. ಹುಬ್ಬಳ್ಳಿಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿ, ಆರೋಪಿ ಫಯಾಜ್ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular