HomeKarnatakaBREAKING NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಸಿಐಡಿ ತನಿಖೆ ನೀಡಲು ನಿರ್ಧಾರ; ಸಿಎಂ ಸಿದ್ದರಾಮಯ್ಯ...

BREAKING NEWS: ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ: ಸಿಐಡಿ ತನಿಖೆ ನೀಡಲು ನಿರ್ಧಾರ; ಸಿಎಂ ಸಿದ್ದರಾಮಯ್ಯ ಮಾಹಿತಿ

ಶಿವಮೊಗ್ಗ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಶಿವಮೊಗ್ಗ ಏರ್ ಪೋರ್ಟ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಕಾರ್ಪೊರೆಟರ್ ನಿರಂಜನ ಹಿರೇಮಠ ಮಗಳು ನೇಹಾ ಹಿರೇಮಠಳನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ. ಘಟನೆ ನಡೆದ ಒಂದೇ ಗಂಟೆಯಲ್ಲಿ ವಿದ್ಯಾನಗರ ಠಾಣೆ ಪೊಲೀಸರು ಕೊಲೆಗಾರ ಆರೀಫ್ ನನ್ನು ಬಂಧಿಸಿದ್ದರು. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ನಡುವೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಬೇಕು ಎಂಬ ಒತ್ತಾಯಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ಮುಂದಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular