HomeKarnatakaನೇಹಾ ಹತ್ಯೆ ಪ್ರಕರಣ ಬಗ್ಗೆ ಸರ್ಕಾರದ ಮಹತ್ವದ ನಿರ್ಧಾರ: ಶೀಘ್ರ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆ

ನೇಹಾ ಹತ್ಯೆ ಪ್ರಕರಣ ಬಗ್ಗೆ ಸರ್ಕಾರದ ಮಹತ್ವದ ನಿರ್ಧಾರ: ಶೀಘ್ರ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್ ಸ್ಥಾಪನೆಗೆ ಸಚಿವರು ನಿರ್ಧಾರ ಕೈಗೊಂಡಿದ್ದಾರೆ.

ಕಾನೂನು ಸಚಿವ ಹೆಚ್.ಕೆ. ಪಾಟೀಲ್ ವಿಶೇಷ ಕೋರ್ಟ್ ಸ್ಥಾಪನೆಗೆ ನಿರ್ಧಾರ ಕೈಗೊಂಡಿದ್ದು, ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ತನಿಖೆಗೆ ವಿಶೇಷ ಕೋರ್ಟ್ ಸ್ಥಾಪನೆ ಮಾಡಲಾಗುವುದು. ಈ ಕುರಿತಾಗಿ ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಚಿವ ಹೆಚ್.ಕೆ. ಪಾಟೀಲ್ ಪತ್ರ ಬರೆದು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

ಹುಬ್ಬಳ್ಳಿಯ ನೇಹಾ ಹತ್ಯೆ ಘಟನೆಯನ್ನು ಸಿಐಡಿ ತನಿಖೆಗೆ ಒಪ್ಪಿಸಿ, ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಮೂಲಕ ಶೀಘ್ರ ನ್ಯಾಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular