HomeKarnatakaನೇಹಾ ಪೋಷಕರನ್ನು ಭೇಟಿಯಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ; ರಾಜಕೀಯ, ಬೇರೆ ವಿಷಯದ...

ನೇಹಾ ಪೋಷಕರನ್ನು ಭೇಟಿಯಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ; ರಾಜಕೀಯ, ಬೇರೆ ವಿಷಯದ ಚರ್ಚೆ ಬೇಡ, ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದ ಲಕ್ಷ್ಮೀ ಹೆಬ್ಬಾಳ್ಕರ್

ಹುಬ್ಬಳ್ಳಿ: ನೇಹಾ ಹಿರೇಮಠ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಳ್ಕರ್ ನೇಹಾ ಪೋಷಕರನ್ನು ಭೇಟಿಯಾಗಿ ಸ್ವಾಂತ್ವನ ಹೇಳಿ ಧೈರ್ಯ ತುಂಬಿದರು.

ಹುಬ್ಬಳ್ಳಿಯ ಬಿಡ್ನಾಳದ ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನೇಹಾ ತಂದೆ ನಿರಂಜನ್ ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ನೇಹಾ ಕುಟುಂಬಸ್ಥರ ದುಃಖದಲ್ಲಿ ನಾನು ಭಾಗಿಯಾಗಿದ್ದೇನೆ. ನಾನೊಬ್ಬ ತಾಯಿಯಾಗಿ ಈ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದು ಹೇಳಿದರು. ‌

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂತಹ ಸಂದರ್ಭದಲ್ಲಿ‌ ಯಾವುದೇ ರಾಜಕೀಯ ಮಾತುಗಳು ಬೇಡ. ಬೇರೆ ಯಾವ ವಿಷಯದ ಬಗ್ಗೆಯೂ ಮಾತನಾಡುವ ಸಂದರ್ಭ‌ ಇದಲ್ಲ. ಆ ಹೆಣ್ಣು ಮಗಳಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ಇದೆ. ನಿರಂಜನ್ ಹಿರೇಮಠ ಅವರು ನಮ್ಮ ಪಕ್ಷದ ಕಾರ್ಪೊರೇಟರ್. ಅವರ ಜೊತೆಗೆ ನಾವಿದ್ದೇವೆ. ಅವರ ಮಗಳಿಗೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular