HomeKarnatakaಭ್ರಷ್ಟಾಚಾರ ತಡೆ ಕಾಯ್ದೆಯಡಿ ಬಿಜೆಪಿ ಶಾಸಕ ನೆಹರು ಓಲೆಕಾರ್, ಪುತ್ರರಿಬ್ಬರಿಗೆ 2 ವರ್ಷ ಜೈಲು ಶಿಕ್ಷೆ

ಭ್ರಷ್ಟಾಚಾರ ತಡೆ ಕಾಯ್ದೆಯಡಿ ಬಿಜೆಪಿ ಶಾಸಕ ನೆಹರು ಓಲೆಕಾರ್, ಪುತ್ರರಿಬ್ಬರಿಗೆ 2 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಬಿಜೆಪಿ ಶಾಸಕ ನೆಹರು ಓಲೆಕಾರ್ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, ಅವರ ಇಬ್ಬರು ಪುತ್ರರಿಗೂ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಸಕರ ವಿರುದ್ಧ ಸ್ವಜನ ಪಕ್ಷಪಾತ ನಡೆಸಿದ ಆರೋಪವಿದೆ. 50 ಲಕ್ಷ ರೂಪಾಯಿ ಮೊತ್ತದ ಕಾಮಗಾರಿ ಪುತ್ರರಿಗೇ ನೀಡಿದ ಆರೋಪ ಕೇಳಿ ಬಂದಿದೆ. ಭ್ರಷ್ಟಾಚಾರ ತಡೆ ಕಾಯ್ದೆಯಡಿ ಶಾಸಕ ಮತ್ತು ಪುತ್ರರಾದ ಮಂಜುನಾಥ ಓಲೆಕಾರ ಮತ್ತು ದೇವರಾಜ್ ಓಲೆಕಾರ್ ಅವರಿಗೂ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಕಾಂಕ್ರೀಟ್ ರಸ್ತೆ ಸೇರಿದಂತೆ ಕೆಲವು ಕಾಮಗಾರಿ ನಡೆಸಿದ ಆರೋಪ ಕೇಳಿ ಬಂದಿದ್ದು, ಭ್ರಷ್ಟಾಚಾರ ತಡೆ ಕಾಯಿದೆಯಡಿ ಶಾಸಕ ಮತ್ತು ಪುತ್ರರಿಬ್ಬರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆಯಾದ ಹಿನ್ನೆಲೆಯಲ್ಲಿ ಜನ ಪ್ರತಿನಿಧಿಗಳ ನ್ಯಾಯಾಲಯದಿಂದಲೇ ಜಾಮೀನು ಮಂಜೂರು ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular