HomeAutoBREAKING: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಪತ್ನಿ ಸಾವು, ಪತಿ ಗಂಭೀರ: ಅಪಘಾತದ ಬಳಿಕ ಲಾರಿ...

BREAKING: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಪತ್ನಿ ಸಾವು, ಪತಿ ಗಂಭೀರ: ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿ

ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಪತ್ನಿ ಸಾವು ಕಂಡಿದ್ದು, ಪತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಯರಪಾಳ್ಯದಲ್ಲಿ ಅಪಘಾತ ಸಂಭವಿಸಿದೆ.

ಸುಂಕದಕಟ್ಟೆಯ ನೀಲಮ್ಮ(45) ಮೃತಪಟ್ಟವರು ಎಂದು ಹೇಳಲಾಗಿದೆ. ಪತಿ ಬಸವರಾಜ ಗಂಭೀರವಾಗಿ ಗಾಯಗೊಂಡಿದ್ದು, ದಾಬಸ್ ಪೇಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ಅತಿ ವೇಗದ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular