HomeKarnatakaಕಸದ ಟೆಂಡರ್ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಗುತ್ತಿಗೆದಾರನ ವಿರುದ್ಧ ಎಫ್ಐಆರ್

ಕಸದ ಟೆಂಡರ್ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ: ಗುತ್ತಿಗೆದಾರನ ವಿರುದ್ಧ ಎಫ್ಐಆರ್

ಬೆಂಗಳೂರು: ಬಿಬಿಎಂಪಿ ಕಸದ ಟೆಂಡರ್ ಕೊಡಿಸುವುದಾಗಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೇರೋಹಳ್ಳಿಯ ಸೌಭಾಗ್ಯ ಅವರಿಗೆ ಬಿಬಿಎಂಪಿ ಕಸದ ಗುತ್ತಿಗೆದಾರ ಹರೀಶ್ ವಂಚಿಸಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕಸ ಸಂಗ್ರಹಿಸುವ ಟೆಂಡರ್ ಕೊಡಿಸುವುದಾಗಿ ನಂಬಿಸಿದ್ದ ಹರೀಶ್ ನಿಮ್ಮ ಬಳಿ ಇರುವ ಚಿನ್ನಾಭರಣ ಒತ್ತೆ ಇಟ್ಟು ಹಣ ತಂದು ಕೊಡಿ ಎಂದು ನೆರಮನೆಯ ಸೌಭಾಗ್ಯ ಅವರಿಗೆ ಹೇಳಿದ್ದಾರೆ.

ಇದನ್ನು ನಂಬಿದ ಸೌಭಾಗ್ಯ ತಮ್ಮಲ್ಲಿದ್ದ 90 ಗ್ರಾಂ ಚಿನ್ನ ಕೊಟ್ಟಿದ್ದು, ನೀವೇ ಒತ್ತೆ ಇಟ್ಟು ಹಣ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಗೋಪಾಲ್ ಮತ್ತು ಪಿಳ್ಳರಾಜು ಎಂಬುವರನ್ನು ಸಾಕ್ಷಿಯಾಗಿಟ್ಟುಕೊಂಡು ಹಣ, ಚಿನ್ನಾಭರಣವನ್ನು ಸೌಭಾಗ್ಯ ನೀಡಿದ್ದಾರೆ. ಆದರೆ, ಎರಡು ವರ್ಷದಿಂದ ಹಣ, ಚಿನ್ನಾಭರಣ ನೀಡದೆ ಕಸದ ಟೆಂಡರ್ ಕೂಡ ಕೊಡಿಸದೆ ಹರೀಶ್ ವಂಚಿಸಿದ್ದಾರೆ ಎಂದು ಸೌಭಾಗ್ಯ ದೂರು ನೀಡಿದ್ದು, ಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular