HomeKarnatakaಹಬ್ಬದ ದಿನ ಸತ್ತರೆ ಸ್ವರ್ಗ ಸಿಗುತ್ತೆ ಎಂಬ ಭ್ರಮೆಯಲ್ಲಿ ವ್ಯಕ್ತಿ ಆತ್ಮಹತ್ಯೆ

ಹಬ್ಬದ ದಿನ ಸತ್ತರೆ ಸ್ವರ್ಗ ಸಿಗುತ್ತೆ ಎಂಬ ಭ್ರಮೆಯಲ್ಲಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತೆ ಎನ್ನುವ ಭ್ರಮೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಭೂಸಂದ್ರದಲ್ಲಿ ನಡೆದಿದೆ.

ಕೃಷ್ಣಮೂರ್ತಿ(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನವೆಂಬರ್ 2ರಂದು ದೀಪಾವಳಿ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎನ್ನುವ ಬಗ್ಗೆ ಚರ್ಚೆ ನಡೆಸಿದ್ದ ಕೃಷ್ಣಮೂರ್ತಿ ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

2022ರ ನವೆಂಬರ್ 22ರಂದು ಕೃಷ್ಣಮೂರ್ತಿ ಪತ್ನಿ ಕೊಲೆ ಮಾಡಿ ಜೈಲು ಸೇರಿದ್ದು, ಎರಡು ವರ್ಷ ಜೈಲಿನಲ್ಲಿ ಇದ್ದು ಆರು ತಿಂಗಳ ಹಿಂದೆ ಬಿಡುಗಡೆಯಾಗಿದ್ದರು. ನಿನ್ನೆ ಸ್ನೇಹಿತರೊಂದಿಗೆ ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎನ್ನುವುದರ ಬಗ್ಗೆ ಚರ್ಚೆ ನಡೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular