HomeKarnatakaBREAKING: ಸರಗಳ್ಳರ ಅಟ್ಟಹಾಸಕ್ಕೆ ಮಹಿಳೆ ಬಲಿ: ಬೆಳ್ಳಂ ಬೆಳಿಗ್ಗೆ ನೆಲಮಂಗಲದಲ್ಲಿ ಘೋರ ಕೃತ್ಯ

BREAKING: ಸರಗಳ್ಳರ ಅಟ್ಟಹಾಸಕ್ಕೆ ಮಹಿಳೆ ಬಲಿ: ಬೆಳ್ಳಂ ಬೆಳಿಗ್ಗೆ ನೆಲಮಂಗಲದಲ್ಲಿ ಘೋರ ಕೃತ್ಯ

ಬೆಂಗಳೂರು: ರಾಜ್ಯದಲ್ಲಿ ಸರಗಳ್ಳತನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಮಹಿಳೆಯರು ಜೀವಭಯದಲ್ಲಿ ಬದುಕಬೇಕಾದ ಸ್ಥಿತಿ ಎದುರಾಗಿದೆ. ಬೆಳ್ಳಂ ಬೆಳಿಗ್ಗೆ ಸರಗಳ್ಳರು ಅಟ್ಟಹಾಸ ಮೆರೆದಿದ್ದಾರೆ. ಮನೆಯಂಗದಲ್ಲಿ ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿ, ಆಕೆಯನ್ನು ಹತ್ಯೆಗೈದು ಮಾಂಗಲ್ಯ ಸರ ದೋಚಿ ಕಳ್ಳರು ಪರಾರುಯಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. 45 ವರ್ಷದ ಜ್ಯೋತಿ ಸರಗಳ್ಳರ ಅಟ್ಟಹಾಸಕ್ಕೆ ಬಲಿಯಾದ ಮಹಿಳೆ. ಮುಂಜಾನೆ 5:30ರ ಸುಮಾರಿಗೆ ಮಹಿಳೆ ಮನೆ ಮುಂದೆ ಕಸ ಗುಡಿಸುತ್ತಿದ್ದರು. ಈ ವೇಳೆ ಬಂದ ಕಳ್ಳರು ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಮುಖಕ್ಕೆ ಸ್ಪೇ ಮಾಡಿ ಕತ್ತಿನಲ್ಲಿದ್ದ 70 ಗ್ರಾಂ ಚಿನ್ನದ ಮಾಂಗಲ್ಯ ಸರ ಕದ್ದು ಎಸ್ಕೇಪ್ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಂಭೀರವಾಗಿ ಹಲ್ಲೆಗೊಳಗಾಗಿ ಕೆಳಗೆ ಬಿದ್ದಿರುವ ಮಹಿಳೆಯ ಮೂಗು, ಕಿವಿಗಳಿಂದ ರಕ್ತ ಹೊರಬಂದಿದೆ. ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನ ಅಸ್ಥಳಕ್ಕೆ ನೆಲಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular