HomeKarnatakaಮಹಿಳೆಯ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಹೊಡೆದಾಟ; ಕೊಲೆಯಲ್ಲಿ ಅಂತ್ಯ

ಮಹಿಳೆಯ ವಿಚಾರಕ್ಕೆ ಅಣ್ಣ-ತಮ್ಮನ ನಡುವೆ ಹೊಡೆದಾಟ; ಕೊಲೆಯಲ್ಲಿ ಅಂತ್ಯ

ನೆಲಮಂಗಲ: ಮಹಿಳೆಯ ವಿಚಾರವಾಗಿ ಅಣ್ಣ-ತಮ್ಮನ ನಡುವೆಯೇ ಗಲಾಟೆ ಆರಂಭವಾಗಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಬೆಳಕಿಗೆ ಬಂದಿದೆ.

ನೆಲಮಂಗಲದ ಎಲೆಕ್ಯಾತನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಹಿಳೆ ಜೊತೆ ಸಂಬಂಧ ಬೆಳಸುವ ವಿಚಾರವಾಗಿ ಅಣ್ಣ-ತಮ್ಮನ ನಡುವೆ ಗಲಾಟೆ ಆರಂಭವಾಗಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಚಿಕ್ಕಪ್ಪನ ಮಗ ಸಹೋದರ ನಾಗೇಶ್ (28)ನನ್ನು ನವೀನ್ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಸದ್ಯ ಕೊಲೆ ಆರೋಪಿ ನವೀನ್ ನನ್ನು ದಾಬಸ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular