HomeLatest NewsBREAKING: ನೆಮ್ಮಾರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರ ಸಂಪೂರ್ಣ ಸ್ಥಗಿತ:...

BREAKING: ನೆಮ್ಮಾರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರ ಸಂಪೂರ್ಣ ಸ್ಥಗಿತ: ಪರ್ಯಾಯ ಮಾರ್ಗದಲ್ಲಿ ತೆರಳಲು ಸೂಚನೆ!

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಗುಡ್ಡಕುಸಿತ ಸಂಭವಿಸುತ್ತಿದ್ದು, ಶೃಗೇರಿ ಬಳಿ ನೆಮ್ಮಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರವಾಗಿ ಗುಡ್ಡ ಕುಸಿಯುತ್ತಿದೆ.

ಭಾರಿ ಮಳೆಯಿಂದಾಗಿ ನೆಮ್ಮಾರು ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಶೃಂಗೇರಿ-ಮಂಗಳೂರು ರಸ್ತೆ ಮಾರ್ಗ ಬಂದ್ ಆಗಿದೆ. ರಸ್ತೆಯಲ್ಲಿ ಬಿದ್ದಿರುವ ಮಣ್ಣು, ಮರಗಳನ್ನು ತೆರವುಗೊಳಿಸಲು ಮಳೆ ಅಡ್ಡಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಭಗದಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಬದಲಿ ಮಾರ್ಗದಲ್ಲಿ ತೆರಳುವಂತೆ ವಾಹನ ಸವಾರರಿಗೆ ಪೊಲೀಸರು ಸೂಚನೆ ನೀಡಿದ್ದಾರೆ. ಮಂಗಳೂರು ತೆರಳುವವರು ಬೇರೆ ಮಾರ್ಗದಲ್ಲಿ ತೆರಳುವಂತೆ ಸೂಚಿಸಲಾಗಿದೆ.

ಬಿದರಗೋಡು, ಆಗುಂಬೆ, ಉಡುಪಿ ಮಾರ್ಗವಾಗಿ ಸಂಚರಿಸುವಂತೆ ಪೊಲೀಸರು ತಿಳಿಸಿದ್ದಾರೆ. ಶೃಂಗೇರಿ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular