HomeKarnatakaದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ 3- 8 ವರ್ಷದ ಮಕ್ಕಳಿಗೆ ಎನ್‌ಇಪಿ ಆಧಾರಿತ ಬುನಾದಿ ಹಂತದ ಪಠ್ಯಕ್ರಮ...

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ 3- 8 ವರ್ಷದ ಮಕ್ಕಳಿಗೆ ಎನ್‌ಇಪಿ ಆಧಾರಿತ ಬುನಾದಿ ಹಂತದ ಪಠ್ಯಕ್ರಮ ಬಿಡುಗಡೆ

ಬೆಂಗಳೂರು: ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ 3 ರಿಂದ 8 ವರ್ಷ ವಯೋಮಿತಿಯ ಮಕ್ಕಳಿಗೆ ಎನ್ಇಪಿ ಆಧಾರಿತ ಬುನಾದಿ ಹಂತದ ಪಠ್ಯಕ್ರಮ ಬಿಡುಗಡೆ ಮಾಡಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರೂಪಿಸಿರುವ ಬುನಾದಿ ಹಂತದ ರಾಜ್ಯ ಪಠ್ಯಕ್ರಮದ ಚೌಕಟ್ಟನ್ನು ಬಿಡುಗಡೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎನ್ಇಪಿ 2020 ಹಾಗೂ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2022ರ ಆಧಾರದ ಮೇಲೆ ಮೂರರಿಂದ ಎಂಟನೇ ವರ್ಷದ ವಯೋಮಿತಿಯ ಮಕ್ಕಳ ಶಿಕ್ಷಣಕ್ಕಾಗಿ ಬುನಾದಿ ಹಂತದ ರಾಜ್ಯ ಪಠ್ಯಕ್ರಮ ಚೌಕಟ್ಟು ರಚನೆ ಮಾಡಿದ ಮೊದಲ ರಾಜ್ಯ ಕರ್ನಾಟಕ ಆಗಿದೆ. ಮೂರರಿಂದ ಎಂಟು ವರ್ಷದ ಮಕ್ಕಳ ಶಿಕ್ಷಣಕ್ಕಾಗಿ ರಚಿಸಲಾದ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟನ್ನು 2022ರ ಅಕ್ಟೋಬರ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರ ಆಧಾರದ ಮೇಲೆ ರಾಜ್ಯಕ್ಕೆ ತಕ್ಕಂತೆ ಬುನಾದಿ ಹಂತದ ಶಿಕ್ಷಣ ಅನುಷ್ಠಾನಕ್ಕೆ ಸಂಬಂಧಿಸಿದ ಇಲಾಖೆಗಳ ಉಪಯೋಗಕ್ಕಾಗಿ ರಾಜ್ಯ ಪಠ್ಯಕ್ರಮ ಚೌಕಟ್ಟು ರೂಪಿಸಲಾಗಿದೆ.

ಅಂಗನವಾಡಿಗಳಲ್ಲಿ ಇರುವ ಚಿಲಿಪಿಲಿ ಪ್ರಾಥಮಿಕ ಶಾಲೆಗಳಲ್ಲಿ ಪದ್ಧತಿಯ ಪಠ್ಯಕ್ರಮದಲ್ಲಿ ಮಾರ್ಪಾಡು ಪ್ರಸ್ತಾಪಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular