BREAKING: ನೇಪಾಳದಲ್ಲಿ ಪ್ರಯಾಣಿಕರ ವಿಮಾನ ಪತನ

ನವದೆಹಲಿ; 68 ಪ್ರಯಾಣಿಕರಿದ್ದ ವಿಮಾನವೊಂದು ಅಪಘಾತಕ್ಕೀಡಾಗಿರುವ ಘಟನೆ ನೇಪಾಳದಲ್ಲಿ ನಡೆದಿದೆ.

ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದ್ದು, 68 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವಿಮಾನವು ರನ್‌ವೇಯಲ್ಲಿ ಪತನಗೊಂಡಿದೆ.

ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದ್ದು, 68 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಯೇಟಿ ಏರ್ ಲೈನ್ಸ್ ವಿಮಾನವು ರನ್‌ವೇಯಲ್ಲಿಯೇ ಹೊತ್ತಿ ಉರಿದಿದೆ.

ಕಠ್ಮಂಡುವಿನಿಂದ ಪೋಖರಾ ನಗರಕ್ಕೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ವಿಮಾನದಲ್ಲಿ 4 ಸಿಬ್ಬಂದಿಗಳು ಹಾಗೂ 68 ಪ್ರಯಾಣಿಕರಿದ್ದರು. ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದ್ದು, ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನ ಸಂಚಾರವನ್ನು ಬಂದ್ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read