HomeKarnatakaನೇಪಾಳದಲ್ಲಿ ಭೀಕರ ಪ್ರವಾಹ ; ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ರಾಜ್ಯ ಸರ್ಕಾರದಿಂದ ಸಹಾಯವಾಣಿ ಬಿಡುಗಡೆ

ನೇಪಾಳದಲ್ಲಿ ಭೀಕರ ಪ್ರವಾಹ ; ಸಂಕಷ್ಟದಲ್ಲಿರುವ ಕನ್ನಡಿಗರಿಗಾಗಿ ರಾಜ್ಯ ಸರ್ಕಾರದಿಂದ ಸಹಾಯವಾಣಿ ಬಿಡುಗಡೆ

ಬೆಂಗಳೂರು: ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ಸುರಕ್ಷತೆ ಹಾಗೂ ಮಾಹಿತಿ ಸಂಗ್ರಹಿಸಲು ಕರ್ನಾಟಕ ಸರ್ಕಾರ ತುರ್ತು ಕ್ರಮ ಕೈಗೊಂಡಿದೆ.

ನೇಪಾಳ ಅಥವಾ ಟಿಬೆಟ್‌ ಸ್ವಾಯತ್ತ ಪ್ರದೇಶದಲ್ಲಿ ಸಿಲುಕಿರುವ ಕರ್ನಾಟಕದ ಪ್ರವಾಸಿಗರು, ಯಾತ್ರಿಕರು ಅಥವಾ ನಾಗರಿಕರ ವಿವರಗಳನ್ನು ಸರ್ಕಾರ ಸಂಗ್ರಹಿಸುತ್ತಿದೆ. ಈ ಮಾಹಿತಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಹಂಚಿಕೊಂಡು ರಕ್ಷಣೆ, ಸ್ಥಳಾಂತರ ಮತ್ತು ಅಗತ್ಯ ನೆರವಿಗೆ ಸಮನ್ವಯ ಮಾಡಲಾಗುತ್ತದೆ.

ತುರ್ತು ಸಹಾಯವಾಣಿ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಸಂಪರ್ಕ ವ್ಯವಸ್ಥೆಯಲ್ಲಿನ ಅಡಚಣೆಗಳ ಹಿನ್ನೆಲೆಯಲ್ಲಿ, ನೇಪಾಳ ಅಥವಾ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಸಿಲುಕಿರುವ ಕರ್ನಾಟಕದವರನ್ನು ಗುರುತಿಸಿ, ಅವರಿಗೆ ಅಗತ್ಯ ನೆರವು ಒದಗಿಸಲು ಕರ್ನಾಟಕ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ರಕ್ಷಣೆ, ಸ್ಥಳಾಂತರ ಹಾಗೂ ಅಗತ್ಯ ಸಹಾಯಕ್ಕಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರ ಕಚೇರಿಗಳೊಂದಿಗೆ ಸಮನ್ವಯ ಸಾಧಿಸಲಾಗುತ್ತಿದೆ.

ನೇಪಾಳ ಅಥವಾ ಟಿಬೆಟ್‌ನಲ್ಲಿ ಸಿಲುಕಿರುವವರು, ಅವರ ಕುಟುಂಬಸ್ಥರು ಹಾಗೂ ಪ್ರವಾಸ ಆಯೋಜಕರು ಅಗತ್ಯ ಮಾಹಿತಿಯನ್ನು ಗೂಗಲ್ ಫಾರ್ಮ್ ಮೂಲಕ ಹಂಚಿಕೊಳ್ಳುವಂತೆ ಮನವಿ ಮಾಡಲಾಗಿದೆ.

ತುರ್ತು ನೆರವಿಗಾಗಿ SEOC ಸಹಾಯವಾಣಿ: 1070 / 080-22253707 ಸಂಖ್ಯೆಗೆ ಸಂಪರ್ಕಿಸಬಹುದು. ಅಥವಾ [email protected] ಇ-ಮೇಲ್‌ಗೆ ಮಾಹಿತಿ ಕಳುಹಿಸಬಹುದು.

ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ತೊಂದರೆಗೊಳಗಾದ ಭಾರತೀಯ ನಾಗರಿಕರಿಗೆ ಯಾವುದೇ ಸಹಾಯ ಅಥವಾ ಮಾಹಿತಿಗಾಗಿ ಕೆಳಗಿನ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು:

+977 985 131 6807
+977 970 910 7500
+977 981 032 6117

ಈ ಎಲ್ಲಾ ಸಂಖ್ಯೆಗಳು WhatsApp‌ನಲ್ಲಿಯೂ ಲಭ್ಯವಿವೆ.

ಸಹಾಯದ ಅಗತ್ಯವಿರುವ ಭಾರತೀಯ ನಾಗರಿಕರು ಆದಷ್ಟು ಬೇಗ ಈ ಸಂಖ್ಯೆಗಳ ಮೂಲಕ ಸಂಪರ್ಕಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular