HomeInternationalBIG UPDATE : ನೇಪಾಳದಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 1,282ಕ್ಕೆ ಏರಿಕೆ; 5,000ಕ್ಕೂ ಹೆಚ್ಚು...

BIG UPDATE : ನೇಪಾಳದಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 1,282ಕ್ಕೆ ಏರಿಕೆ; 5,000ಕ್ಕೂ ಹೆಚ್ಚು ಜನ ನಾಪತ್ತೆ

ನುವಾಕೋಟ್: ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಿಂದ ಸಾವಿನ ಸಂಖ್ಯೆ 1,282ಕ್ಕೆ ಏರಿಕೆಯಾಗಿದೆ. ನೇಪಾಳ ಪೊಲೀಸರ ಪ್ರಕಾರ, ಚಿತ್ವಾನ್‌ನಲ್ಲಿ ಅತಿ ಹೆಚ್ಚು 359 ಮಂದಿ ಮೃತಪಟ್ಟಿದ್ದಾರೆ. ಬಳಿಕ ನವಲಪರಾಸಿ ಪೂರ್ವದಲ್ಲಿ 218, ನವಲಪರಾಸಿ ಪಶ್ಚಿಮದಲ್ಲಿ 208, ನುವಾಕೋಟ್‌ನಲ್ಲಿ 185, ರಸುವಾದಲ್ಲಿ 140, ಗೋರ್ಖಾದಲ್ಲಿ 72, ಧಾದಿಂಗ್‌ನಲ್ಲಿ 60 ಹಾಗೂ ತನಾಹುದಲ್ಲಿ 38 ಮಂದಿ ಮೃತಪಟ್ಟಿದ್ದಾರೆ. ಕಠ್ಮಂಡುವಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಇಬ್ಬರು ಮೃತಪಟ್ಟಿದ್ದಾರೆ.

ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ (NDRRMA) ನೀಡಿರುವ ಮಾಹಿತಿಯಂತೆ, ನಿನ್ನೆ ಸಂಜೆ ವೇಳೆಗೆ 5,053 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಪ್ರವಾಹದಲ್ಲಿ ಮೃತಪಟ್ಟವರ ಗುರುತು ಪತ್ತೆಹಚ್ಚಲು ನೇಪಾಳದಲ್ಲಿ ಇದೀಗ ಡಿಎನ್‌ಎ ಪರೀಕ್ಷೆಗಳನ್ನು ಸಹ ಬಳಸಲಾಗುತ್ತಿದೆ.

ಇದೇ ವೇಳೆ, ನೇಪಾಳದ ತ್ರಿಶೂಲಿ 3A ಜಲವಿದ್ಯುತ್ ಯೋಜನೆಯ ಸುರಂಗದಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರನ್ನು 10 ದಿನಗಳ ಬಳಿಕ ಜೀವಂತವಾಗಿ ರಕ್ಷಿಸಲಾಗಿದೆ. ಭೋಟೆಕೋಶಿ ನದಿಯ ಹಠಾತ್ ಪ್ರವಾಹದ ನಂತರ ಇಬ್ಬರೂ ಸುರಂಗದಲ್ಲಿ ಸಿಲುಕಿಕೊಂಡಿದ್ದರು. ರಕ್ಷಣಾ ಕಾರ್ಯಾಚರಣೆಯ ವೇಳೆ ಸುರಂಗದೊಳಗಿಂದ ಧ್ವನಿ ಕೇಳಿಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಯಿತು. ಬಳಿಕ ರಕ್ಷಣಾ ಸಿಬ್ಬಂದಿ ಸುರಂಗದೊಳಗೆ ಸಿಲುಕಿದ್ದವರೊಂದಿಗೆ ಸಂಪರ್ಕ ಸಾಧಿಸುವಲ್ಲಿ ಯಶಸ್ವಿಯಾದರು ಎಂದು ನೇಪಾಳ ಸೇನೆಯ ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದುವರೆಗೆ ತುರ್ತು ರಕ್ಷಣಾ ತಂಡಗಳು 12,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ರಕ್ಷಿಸಿವೆ. ಕಳೆದ ತಿಂಗಳ 26ರಂದು ನೇಪಾಳ-ಟಿಬೆಟ್ ಗಡಿಯ ಸಮೀಪ ಸಂಭವಿಸಿದ ಹಿಮ-ಬಂಡೆ ಕುಸಿತದಿಂದ ಈ ಭೀಕರ ಹಠಾತ್ ಪ್ರವಾಹ ಉಂಟಾಗಿದೆ ಎಂದು ತಿಳಿದುಬಂದಿದೆ. ಪ್ರವಾಹದಿಂದ ಉತ್ತರ ಮತ್ತು ಮಧ್ಯ ನೇಪಾಳದ ಹಲವು ಪಟ್ಟಣಗಳು ಹಾಗೂ ಗ್ರಾಮಗಳು ತೀವ್ರವಾಗಿ ಹಾನಿಗೊಳಗಾಗಿದ್ದು, ಭಾರೀ ಪ್ರಮಾಣದ ಆಸ್ತಿ-ಪಾಸ್ತಿ ನಾಶವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular