ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಜಳಪ್ರಯದಲ್ಲಿ ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಇತ್ತೀಚಿನ ಮಾಹಿತಿ ಪ್ರಕಾರ ಪ್ರಹಾದಲ್ಲಿ ಸಾವನ್ನಪ್ಪಿದವಾ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ.
ನೇಪಾಳ-ಟಿಬೆಟ್ ಗಡಿ ಹಿಮಕುಸಿತದಿಂದ ಸಂಭವಿಸಿದ ಪ್ರವಾಹದ ಹೊಡೆತದಿಂದಾಗಿ ನೇಪಾಳ ನರಕದಂತಾಗಿದೆ. ಪ್ರವಾಹಕ್ಕೆ ಮೃತಪಟ್ಟವರ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ. 4000ಕ್ಕೂ ಹೆಚ್ಚು ಜನರು ಕಣ್ಮರೆಯಾಗಿದ್ದಾರೆ.
ನೇಪಾಳದಲ್ಲಿ 987 ಜನರು ಸಾವನ್ನಪ್ಪಿದ್ದರೆ, ಚೀನಾದಲ್ಲಿ 16 ಜನರು ಮೃತಪಟ್ಟಿದ್ದಾರೆ. ನಾಪತ್ತೆಯಾದವರಿಗಾಗಿ ರಕ್ಷಣಾ ಪಡೆಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಪ್ರವಾಹಪೀಡಿತ ದುರ್ಗಮ ಪ್ರದೇಶಗಳನ್ನು ತಲುಪಲು ರಕ್ಷಣ ಅಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಭೀಕರ ಪ್ರವಾಹದ ಬಳಿಕ ನುವಾಕೋಟ್ ಜಿಲ್ಲೆಯ ಬೆತ್ರಾವತಿ ಗ್ರಾಮದಲ್ಲಿ ಒಂದೇ ಮನೆಯೊಳಗೆ ಹೂತುಹೋಗಿದ್ದ 23 ಮೃತದೇಹಗಳು ಪತ್ತೆಯಾಗಿದ್ದು, ದುರಂತದ ಕರಾಳತೆಯನ್ನು ಸಾರುತ್ತಿದೆ.
ಭೋಟೆಕೋಶಿ ಮತ್ತು ತ್ರಿಶೂಲಿ ನದಿಗಳ ರೌದ್ರಾವತಾರಕ್ಕೆ ಸಿಲುಕಿದ ಬೆತ್ರಾವತಿಯ ಮೂರು ಅಂತಸ್ತಿನ ಮನೆಯೊಂದರ ಕೊಠಡಿಯೊಳಗೆ 21 ಹಾಗೂ ಹೊರಗೆ 2 ಮೃತದೇಹಗಳು ಪತ್ತೆಯಾಗಿವೆ. ಇವರಲ್ಲಿ ವಿದೇಶಿ ಪ್ರಜೆಗಳು ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಗೋಸಾಯಿಕುಂಡಕ್ಕೆ ತೆರಳುತ್ತಿದ್ದ ಯಾತ್ರಿಕರು ಇರಬಹುದು ಎಂದು ಶಂಕಿಸಲಾಗಿದೆ.
ಪ್ರವಾಹದ ನೀರು ನುಗ್ಗಿದಾಗ ತಪ್ಪಿಸಿಕೊಳ್ಳಲು ಸಂತ್ರಸ್ತರು ಮೇಲಿನ ಮಹಡಿಯ ಕೊಠಡಿಗೆ ಓಡಿದ್ದಾರೆ. ಆದರೆ ಭಾರಿ ಪ್ರಮಾಣದ ಮಣ್ಣು ಮತ್ತು ಪ್ರವಾಹದ ನೀರು ಕಟ್ಟಡವನ್ನೇ ನುಂಗಿಹಾಕಿದ್ದರಿಂದ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಯುವತಿಯೊಬ್ಬಳನ್ನು ತಾಯಿ ಗಟ್ಟಿಯಾಗಿ ತಬ್ಬಿಕೊಂಡ ಸ್ಥಿತಿಯಲ್ಲೇ ಇಬ್ಬರ ಶವಗಳು ಪತ್ತೆಯಾಗಿವೆ.
ತ್ರಿಶೂಲಿ 3ಎ ಜಲವಿದ್ಯುತ್ ಯೋಜನೆಯ ಸುಮಾರು 40-42ಎಂಜಿನಿಯರ್‌ಗಳು ಹಾಗೂ ತ್ರಿಶೂಲಿ 3ಬಿ ಯೋಜನೆಯ 118 ಉದ್ಯೋಗಿಗಳು ಸೇರಿದಂತೆ ವಿವಿಧ ಸುರಂಗಗಳಲ್ಲಿ ನೂರಾರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ.
ಇನ್ನು ರಸುವಾ ಜಿಲ್ಲೆಯ ಉತ್ತರಗಯಾದಲ್ಲಿ ಸುಮಾರು 350ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

