HomeInternationalನೇಪಾಳ ಪ್ರವಾಹದಲ್ಲಿ ಮತ್ತೊಂದು ಅಚ್ಚರಿ; 3 ದಿನ ಮಣ್ಣಿನಡಿ ಸಿಲುಕಿ ಸಾವನ್ನು ಗೆದ್ದು ಬಂದ 6...

ನೇಪಾಳ ಪ್ರವಾಹದಲ್ಲಿ ಮತ್ತೊಂದು ಅಚ್ಚರಿ; 3 ದಿನ ಮಣ್ಣಿನಡಿ ಸಿಲುಕಿ ಸಾವನ್ನು ಗೆದ್ದು ಬಂದ 6 ವರ್ಷದ ಬಾಲಕಿ!

ಭೀಕರ ನೇಪಾಳ ಪ್ರವಾಹದ ನಡುವೆ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ. ರಸುವಾ ಜಿಲ್ಲೆಯಲ್ಲಿ ಕಟ್ಟಡದ ಅವಶೇಷಗಳಡಿ ಸುಮಾರು 3 ದಿನಗಳ ಕಾಲ ಸಿಲುಕಿದ್ದ 6 ವರ್ಷದ ಬಾಲಕಿಯೊಬ್ಬಳು ಜೀವಂತವಾಗಿ ಪಾರಾಗಿದ್ದಾಳೆ.

ಭೋಟೇಕೋಶಿ ನದಿ ಉಕ್ಕಿ ಹರಿದ ಪರಿಣಾಮ ಉಂಟಾದ ಪ್ರವಾಹದಿಂದ ಮಣ್ಣಿನ ರಾಶಿಯಡಿ ಸಿಲುಕಿದ್ದ ಬಾಲಕಿಯನ್ನು ನೇಪಾಳದ ಭದ್ರತಾ ಪಡೆಗಳು ಸುರಕ್ಷಿತವಾಗಿ ರಕ್ಷಿಸಿವೆ.

ಗೋಸೈಂಕುಂಡ ಗ್ರಾಮೀಣ ಪುರಸಭೆ ವ್ಯಾಪ್ತಿಯ ಟಿಮುರೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭೋಟೇಕೋಶಿ ನದಿಯ ಪ್ರವಾಹದ ರಭಸಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹಾಗೂ ಮಣ್ಣು ನುಗ್ಗಿ ಹಲವು ಮನೆಗಳು ಹಾನಿಗೊಳಗಾಗಿದ್ದವು. ಈ ವೇಳೆ ಮಣ್ಣಿನ ರಾಶಿಯಡಿ ಸಿಲುಕಿದ್ದವರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದ ಸಶಸ್ತ್ರ ಪೊಲೀಸ್ ಪಡೆಯ ಸಿಬ್ಬಂದಿಗೆ ಬಾಲಕಿಯ ಅಳುವ ಶಬ್ದ ಕೇಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಸಿಬ್ಬಂದಿ ಮಣ್ಣು ಹಾಗೂ ಅವಶೇಷಗಳನ್ನು ತೆರವುಗೊಳಿಸಿ ಬಾಲಕಿಯನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ಕರೆದೊಯ್ಯಲು ವಿಳಂಬ

ಮಣ್ಣಿನಡಿಯಿಂದ ರಕ್ಷಿಸಿದ ಬಳಿಕ ಬಾಲಕಿಯನ್ನು ಮೊದಲು ಟಿಮುರೆಯಲ್ಲಿರುವ ಸಶಸ್ತ್ರ ಪೊಲೀಸ್ ಪಡೆಯ ಗಡಿ ಹೊರಠಾಣೆಗೆ ಕರೆದೊಯ್ಯಲಾಯಿತು. ಆದರೆ ಬಾಲಕಿಯ ಆರೋಗ್ಯ ಸ್ಥಿತಿ ಹದಗೆಡುತ್ತಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶುಕ್ರವಾರವೇ ಹೆಲಿಕಾಪ್ಟರ್ ಮೂಲಕ ಕಠ್ಮಂಡುವಿಗೆ ಕರೆದೊಯ್ಯಲು ಪ್ರಯತ್ನಿಸಲಾಯಿತು.ಆದರೆ ಪ್ರತಿಕೂಲ ಹವಾಮಾನ ಹಾಗೂ ಕತ್ತಲು ಆವರಿಸಿದ್ದರಿಂದ ಅಂದು ಬಾಲಕಿಯನ್ನು ಆಸ್ಪತ್ರೆಗೆ ಏರ್‌ಲಿಫ್ಟ್ ಮಾಡಲು ಸಾಧ್ಯವಾಗಲಿಲ್ಲ. ಬಳಿಕ ಶನಿವಾರ ರಾತ್ರಿ ಹೆಲಿಕಾಪ್ಟರ್ ಮೂಲಕ ಬಾಲಕಿಯನ್ನು ಕಠ್ಮಂಡುವಿನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಸದ್ಯ ಬಾಲಕಿಗೆ ಆಸ್ಪತ್ರೆಯಲ್ಲಿ ವೈದ್ಯರ ನಿರಂತರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುಮಾರು ಮೂರು ದಿನಗಳ ಕಾಲ ಮಣ್ಣಿನ ರಾಶಿಯಡಿ ಸಿಲುಕಿದ್ದರೂ ಜೀವಂತವಾಗಿ ಪಾರಾದ ಬಾಲಕಿಯ ಘಟನೆ ಭೀಕರ ಪ್ರವಾಹದ ನಡುವೆ ಆಶಾಕಿರಣ ಮೂಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular