HomeInternationalಪ್ರವಾಹ ಸಂತ್ರಸ್ತೆಯ ಮೃತದೇಹದಿಂದ ಆಭರಣ ದೋಚಿದ ಕಿಡಿಗೇಡಿಗಳು: ವಿಕೃತ ಕೃತ್ಯ ಕ್ಯಾಮೆರಾದಲ್ಲಿ ಸೆರೆ, ಆರೋಪಿಗಳ ಬಂಧನ

ಪ್ರವಾಹ ಸಂತ್ರಸ್ತೆಯ ಮೃತದೇಹದಿಂದ ಆಭರಣ ದೋಚಿದ ಕಿಡಿಗೇಡಿಗಳು: ವಿಕೃತ ಕೃತ್ಯ ಕ್ಯಾಮೆರಾದಲ್ಲಿ ಸೆರೆ, ಆರೋಪಿಗಳ ಬಂಧನ

ನೇಪಾಳದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿರುವ ಬೆನ್ನಲ್ಲೇ, ಮನುಷ್ಯತ್ವಕ್ಕೆ ಕಪ್ಪುಚುಕ್ಕೆ ತರುವಂತಹ ಆಘಾತಕಾರಿ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಪ್ರವಾಹದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡ ಮಹಿಳೆಯೊಬ್ಬರ ಮೃತದೇಹದಿಂದ ಚಿನ್ನದ ಆಭರಣ ಕದ್ದು ವಿಕೃತ ಮನಸ್ಥಿತಿ ಮೆರೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚೆಗೆ ವೈರಲ್ ಆಗಿರುವ 41 ಸೆಕೆಂಡುಗಳ ವಿಡಿಯೋದಲ್ಲಿ, ಕನಿಷ್ಠ ಇಬ್ಬರು ವ್ಯಕ್ತಿಗಳು ಮರದ ಹಲಗೆಗಳನ್ನು ಬಳಸಿ ಮಹಿಳೆಯ ಮೃತದೇಹವನ್ನು ತಳ್ಳುತ್ತಾ, ಆಕೆಯ ತಲೆಗೂದಲು ಹಿಡಿದು ಎಳೆಯುವುದು ಕಂಡುಬಂದಿದೆ. ಬಳಿಕ ಆಕೆಯ ಎರಡೂ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ಕಿತ್ತು ಪ್ರತ್ಯೇಕವಾಗಿ ಇಟ್ಟುಕೊಳ್ಳುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ನಡೆಯುವಾಗ ಸುತ್ತಲೂ ಹಲವು ಜನರು ವೀಕ್ಷಿಸುತ್ತಾ ನಿಂತಿದ್ದು, ಕೆಲವರು ಇದನ್ನು ತಮ್ಮ ಮೊಬೈಲ್ ಫೋನ್‌ಗಳಲ್ಲಿ ಚಿತ್ರೀಕರಿಸುತ್ತಿದ್ದರು.

ವಿಡಿಯೋ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಖಂಡನೆ ವ್ಯಕ್ತವಾಗುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ನೇಪಾಳ ಪೊಲೀಸರು, ಈ ಅಮಾನವೀಯ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಪೊಲೀಸರು, ಮೃತದೇಹದಿಂದ ಓಲೆ ಕಳವು ಮಾಡಿದವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ನೂರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಸ್ತೆಗಳು, ಸೇತುವೆಗಳು ಕೊಚ್ಚಿಹೋಗಿ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ದುರಂತದ ಸಮಯದಲ್ಲಿ ನೆರವಿಗೆ ಬರಬೇಕಾದ ಕೆಲವರು ಮೃತದೇಹದ ಮೇಲೆಯೇ ದರೋಡೆಗೆ ಇಳಿದಿರುವುದು ಸಾರ್ವಜನಿಕರಲ್ಲಿ ಭಾರೀ ಆಕ್ರೋಶ ಮೂಡಿಸಿದೆ.

“>

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular