HomeLatest NewsBIG NEWS: ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ: 42 ಜನರು ದುರ್ಮರಣ, ಹಲವರು ನಾಪತ್ತೆ

BIG NEWS: ನೇಪಾಳದಲ್ಲಿ ಭೀಕರ ಪ್ರವಾಹ, ಭೂಕುಸಿತ: 42 ಜನರು ದುರ್ಮರಣ, ಹಲವರು ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಭೂಕಂಪ ಸಂಭವಿಸಿದೆ. ಘಟನೆಯಲ್ಲಿ 42ಜನರು ಸಾವನ್ನಪ್ಪಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಹಲವೆಡೆ ಪ್ರವಾಹವುಂಟಾಗಿದ್ದು, ಭೂಕುಸಿತ ಸಂಭವಿಸಿದೆ. 42 ಜನರು ಸಾವನ್ನಪ್ಪಿದ್ದು, ಐವರು ಕಣ್ಮರೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಗಳಲ್ಲಿ ಬೀಡು ಬಿಟ್ಟಿರುವ ನೇಪಾಳ ಸೇನೆ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಮಳೆ ಹೆಚ್ಚುತ್ತಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯುಂಟಾಗಿದ್ದು, ವಿಳಂಬವಾಗುತ್ತಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಪಾಳದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆ಼ಚ್ಚರಿಕಾ ಕ್ರಮವಾಗಿ ರಾಜಧಾನಿ ಕಠ್ಮಂಡುಗೆ ಬರುವ ಹಾಗೂ ತೆರಳುವ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular