ಕಠ್ಮಂಡು: ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನೇಪಾಳದಲ್ಲಿ ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ನಿಷೇಧ ಹೇರಿತ್ತು. ಇದನ್ನು ಖಂಡಿಸಿ ಯುವಜನತೆ ಬೃಹತ್ ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಅಲ್ಲಿನ ಸರ್ಕಾರ ಸೋಷಿಯಲ್ ಮೀಡಿಯಾ ಮೇಲಿನ ನಿಷೇಧ ಆದೇಶ ಹಿಂಪಡೆದಿತ್ತು. ಆದಾಗ್ಯೂ ಕೂಡ ನೇಪಾಳ ಸರ್ಕಾರದ ವಿರುದ್ಧ ಆಕ್ರೋಶ, ಪ್ರತಿಭಟನೆ ನಿಂತಿಲ್ಲ. ಹಿಂಸಾಚಾರ ಮುಂದುವರೆದಿತ್ತು.
ಇಂದು ನಡೆದ ಪ್ರತಿಭಟನೆ ವೇಳೆ ಪ್ರಧಾನಿ ಕೆ.ಪಿ.ಶರ್ಮಾ ಓಲಿ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು ಪ್ರಧಾನಿ ನಿವಾಸಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದದರೆ. ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.