ಬೆಂಗಳೂರು: ನೇಪಾಳದಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ಉದ್ವಿಗ್ನಗೊಳ್ಳುತ್ತಿದ್ದು, ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಧಾವಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಸ್ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
ನೇಪಾಳದಲ್ಲಿ ಪ್ರಕ್ಷುಬ್ಧವಾತಾವಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರ‍್ಮಂಡು ವಿಮಾನ ನಿಲ್ದಾಅಣದಲ್ಲಿ ಸಿಲುಕಿರುವ ೩೯ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕ್ರಮ ಕೈಗೊಳ್ಳುವಂತೆ ಸಿಎಸ್ ಶಾಲಿನಿ ರಜನೀಶ್ ಅವರಿಗೆ ಸಿಎಂ ಸೂಚಿಸಿರುವ ಹಿನ್ನೆಲೆಯಲ್ಲಿ ಶಾಲಿನಿ ರಜನೀಶ್ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.
ಸದ್ಯ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿ ಕರ್ನಾಟಕ ಭವನದಲ್ಲಿರುವ ಅಧಿಕಾರಿಗಳು ಕನ್ನಡಿಗರ ಸಂಪರ್ಕದಲ್ಲಿದ್ದಾರೆ. ರಾಜ್ಯದ ಅಧಿಕಾರಿಗಳು ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಿದ್ದು, ಕನ್ನಡಿಗರನ್ನು ಕರೆತರು ಅಧಿಕಾರಿಗಳ ವಿಶೇಷ ತಂಡ ಸಜ್ಜಾಗಿದೆ ಎಂದು ತಿಳಿದುಬಂದಿದೆ.