ಬೆಂಗಳೂರು: ಕುಖ್ಯಾತ ರೌಡಿಶೀಟರ್ ನೇಪಾಳಿ ಮಂಜನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಗೊಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ.
ಗೊಲ್ಲಹಳ್ಳಿ ಮುಖ್ಯರಸ್ತೆಯಲ್ಲಿ ನೇಪಾಳಿ ಮಂಜನ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ನಾಲ್ಕೈದು ಸ್ನೇಹಿತರೊಂದಿಗೆ ಮಂಜ ನಿರ್ಜನ ಪ್ರದೇಶದಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿದ್ದ ವೇಳೆ ದಾಳಿ 2 ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು ಲಾಂಗ್, ಮಚ್ಚುಗಳಿಂದ ಹಲ್ಲೆ ನಡೆಸಿ ನೇಪಾಳಿ ಮಂಜನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಹೆಬ್ಬಗೋಡಿ ಪೋಲಿಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದ ಮಂಜನ ವಿರುದ್ಧ 12 ಪ್ರಕರಣ ದಾಖಲಾಗಿದ್ದವು. ಕೊಲೆ, ಕೊಲೆ ಯತ್ನ, ರಾಬರಿ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಮಂಜ ಭಾಗಿಯಾಗಿದ್ದ. ಎರಡು ಬಾರಿ ಗೂಂಡಾ ಕಾಯ್ದೆ ಹಾಕಿದ್ದರೂ ಬುದ್ಧಿ ಕಲಿತಿರಲಿಲ್ಲ.