HomeLatest NewsBIG NEWS: 36 ವರ್ಷಗಳ ಹಿಂದಿನ ಕಪಿಲ್ ದೇವ್ ವಿಶ್ವಕಪ್ ದಾಖಲೆ ಮುರಿದ ನೆದರ್ಲೆಂಡ್ಸ್ ನಾಯಕ...

BIG NEWS: 36 ವರ್ಷಗಳ ಹಿಂದಿನ ಕಪಿಲ್ ದೇವ್ ವಿಶ್ವಕಪ್ ದಾಖಲೆ ಮುರಿದ ನೆದರ್ಲೆಂಡ್ಸ್ ನಾಯಕ ಸ್ಕಾಟ್ ಎಡ್ವರ್ಡ್ಸ್

ಧರ್ಮಶಾಲಾ: ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು ನೆದರ್ಲೆಂಡ್ಸ್ ಮಣಿಸಿ ಅಚ್ಚರಿ ಮೂಡಿಸಿದೆ.

ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಸ್ಕಾಟ್ ಎಡ್ವರ್ಡ್ಸ್ ಅಜೇಯ 78 ರನ್ ಗಳಿಸಿದ್ದಾರೆ. ಈ ಮೂಲಕ ಅವರು ಭಾರತದ ಕಪಿಲ್ ದೇವ್ ದಾಖಲೆ ಮುರಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಡ್ವರ್ಡ್ಸ್ ಅವರ 78* ವಿಶ್ವಕಪ್ ಇತಿಹಾಸದಲ್ಲಿ ನಂ. 7 ಅಥವಾ ಅದಕ್ಕಿಂತ ಕಡಿಮೆ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ನಾಯಕನ ಗರಿಷ್ಠ ಸ್ಕೋರ್ ಆಗಿದೆ. 1987 ರ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ 72* ರನ್ ಗಳಿಸಿದ ಭಾರತದ ಮಾಜಿ ನಾಯಕ ಕಪಿಲ್ ದೇವ್ ಅವರ 36 ವರ್ಷಗಳ ಹಳೆಯ ದಾಖಲೆಯನ್ನು ಡಚ್ ನಾಯಕ ಮೀರಿಸಿದ್ದಾರೆ.

ವಿಶ್ವಕಪ್‌ನಲ್ಲಿ ನಂ.7 ಅಥವಾ ಅದಕ್ಕಿಂತ ಕಡಿಮೆ ಸ್ಥಾನದಲ್ಲಿ ಬ್ಯಾಟಿಂಗ್ ಮಾಡುವ ನಾಯಕರ ಗರಿಷ್ಠ ಸ್ಕೋರ್

78* – ಸ್ಕಾಟ್ ಎಡ್ವರ್ಡ್ಸ್ (NED vs SA), 2023

72* – ಕಪಿಲ್ ದೇವ್ (IND vs NZ), 1987

72* – ಹೀತ್ ಸ್ಟ್ರೀಕ್ (ZIM vs NZ), 2003

68 – ದಸುನ್ ಶನಕ (SL vs SA), 2023

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular