BREAKING : ವಿಜಯಪುರದಲ್ಲಿ ಹೊಸ ‘ವಿಮಾನ ನಿಲ್ದಾಣ’ ಸ್ಥಾಪನೆ ಯೋಜನೆಗೆ ಸಿಎಂ ಅನುಮೋದನೆ

ಬೆಂಗಳೂರು: ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣಸ್ಥಾಪನೆಯೋಜನೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಅನುಮೋದನೆ ನೀಡಿದೆ.

ಈ ಬಗ್ಗೆ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ.ಆರೋಗ್ಯ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಂಪರ್ ಕೊಡುಗೆ ನೀಡಿದ್ದು, ದೇಶದಲ್ಲಿ ಮೊದಲ ಅಂಗಾಂಗ ಜೋಡಣೆ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಕಲಬುರಗಿಯಲ್ಲಿ ತಾಯಿ ಮತ್ತು ಮಗು ಆಸ್ಪತ್ರೆ ನಿರ್ಮಾಣ, ಕೊಪ್ಪಳ, ಕಾರವಾರ, ಕೊಡಗು ಜಿಲ್ಲಾ ಆಸ್ಪತ್ರೆ ಉನ್ನತೀಕರಣ ಮಾಡಲಾಗುವುದು, ಕನಕಪುರದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ, ಶೇಂಗ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲಾಗುವುದು. ರೈತರ ಹಿತದೃಷ್ಟಿಯಿಂದ ಕೇಂದ್ರದ ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ.

ಅನುಗ್ರಹ ಯೋಜನೆ ಮರು ಜಾರಿ ಮಾಡಲಾಗುವುದು, ರೈತರಿಗೆ 3 ರಿಂದ 5 ಲಕ್ಷ ರೂ.ವರೆಗೆ ಅಲ್ಪಾವಧಿ ಸಾಲ ನೀಡಲಾಗುವುದು. ಮೈಸೂರು-ಕಲಬುರಗಿಯಲ್ಲಿ ಟ್ರಾಮಾ ಸೆಂಟರ್ ಗೆ ಅನುದಾನ, ನಮ್ಮ ಮೆಟ್ರೋಗೆ 30,000 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.ಇಂದಿರಾ ಕ್ಯಾಂಟೀನ್ ಗೆ 100 ಕೋಟಿ ರೂ. ಅನುದಾನ ನೀಡಲಾಗುವುದು, ಬ್ರ್ಯಾಂಡ್ ಬೆಂಗಳೂರಿಗೆ ಬಂಪರ್ ಗಿಫ್ಟ್ ನೀಡಲಾಗಿದ್ದು, ನಮ್ಮ ಮೆಟ್ರೋಗೆ 30,000 ಕೋಟಿ ರೂ. ಅನುದಾನ ನೀಡಲಾಗಿದೆ. 45 ಸಾವಿರ ಕೋಟಿ ಅನುದಾನ ನೀಡಲಾಗಿದೆ. ವೈಟ್ ಟಾಪಿಂಗ್, ರಸ್ತೆಅಭಿವೃದ್ಧಿ, ತ್ಯಾಜ ವಿಲೇವಾರಿ, ಮೆಟ್ರೋ ಉಪನಗರ ರೈಲಿಗೆ 30 ಸಾವಿರ ಕೋಟಿ ರೂ. ನಿಯೋಜನೆ ಮಾಡಲಾಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read