HomeCrimeಶೌಚಾಲಯದಲ್ಲಿ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಶವ ಪತ್ತೆ

ಶೌಚಾಲಯದಲ್ಲಿ ರುಂಡ, ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಶವ ಪತ್ತೆ

ಕೊಪ್ಪಳ: ಕೊಪ್ಪಳ ನಗರದ ಜಿಲ್ಲಾ ಆಸ್ಪತ್ರೆಯ ರ್ಯಾಪಿಡ್ ವಾರ್ಡ್ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ.

ರುಂಡ ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಶಿಶು ಶವ ಪತ್ತೆಯಾಗಿದೆ. ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ವಾರ್ಡ್ ಇದಾಗಿದ್ದು, ಸಮೀಪದಲ್ಲಿ ಹೆರಿಗೆ ವಿಭಾಗ ಇಲ್ಲ. ನೌಕರರೊಬ್ಬರು ಶೌಚಾಲಯ ಸ್ವಚ್ಛಗೊಳಿಸಲು ನೀರು ಹಾಕಿದಾಗ ಶಿಶು ಶವ ತೇಲಿದೆ. ಗೊಂಬೆ ಇರಬಹುದೆಂದು ಅದನ್ನು ತೆಗೆಯಲು ಹೋದಾಗ ತಲೆ ಮಾತ್ರ ಹೊರ ಬಂದಿದೆ. ನಂತರ ಕೈಕಾಲು, ಮುಂಡ ಪ್ರತ್ಯೇಕವಾಗಿರುವುದು ಕಂಡುಬಂದಿದೆ. ಕಿಮ್ಸ್ ವೈದ್ಯಕೀಯ ಅಧೀಕ್ಷಕರು ಕೊಪ್ಪಳ ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿ ಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular