HomeKarnatakaBIG NEWS: ತುಂಬಿ ಹರಿಯುತ್ತಿದ್ದ ತುಂಗಭದ್ರಾ ಕಾಲುವೆಯಲ್ಲಿ ನವಜಾತ ಶಿಶುವಿನ ಶವ ಪತ್ತೆ

BIG NEWS: ತುಂಬಿ ಹರಿಯುತ್ತಿದ್ದ ತುಂಗಭದ್ರಾ ಕಾಲುವೆಯಲ್ಲಿ ನವಜಾತ ಶಿಶುವಿನ ಶವ ಪತ್ತೆ

ರಾಯಚೂರು: ನವಜಾತ ಶಿಶುವಿನ ಮೃತದೇಹ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಸಾಗರ್ ಕ್ಯಾಂಪ್ ಬಳಿ ನಡೆದಿದೆ.

ಹುಟ್ಟಿದ ಕೆಲವೇ ಸಮಯದಲ್ಲಿ ಮಗುವನ್ನು ಕಾಲುವೆಗೆ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ತುಂಬಿ ಹರಿಯುತ್ತಿದ್ದ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಶಿಶುವನ್ನು ಕಂಡ ಸ್ಥಳೀಯರು ಮಗುವನ್ನು ಮೇಲಕೆತ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶಿಶುವನ್ನು ಹೆತ್ತವರೇ ಬಿಸಡಿರುವ ಸಂಶಯ ವ್ಯಕ್ತವಾಗಿದೆ. ಬಳಗಾನೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular