HomeKarnatakaGOOD NEWS : ರಾಜ್ಯದಲ್ಲಿ ಶೀಘ್ರವೇ ಅರ್ಹರಿಗೆ ಹೊಸ 'BPL ಕಾರ್ಡ್' ವಿತರಣೆ : ಸಚಿವ...

GOOD NEWS : ರಾಜ್ಯದಲ್ಲಿ ಶೀಘ್ರವೇ ಅರ್ಹರಿಗೆ ಹೊಸ ‘BPL ಕಾರ್ಡ್’ ವಿತರಣೆ : ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ.!

ಬೆಳಗಾವಿ : ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುವರ್ಣಸೌಧದಲ್ಲಿ ಮಾತನಾಡಿದ ಸಚಿವರು ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನ ಎಪಿಎಲ್ ಕಾರ್ಡ್ ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದರು.

ಎಪಿಎಲ್ ಕಾರ್ಡ್ ಗೆ ಮೊದಲು 15 ಕೆಜಿ ಅಕ್ಕಿ ಕೊಡುತ್ತಿದ್ದೆವು. ಆದರೆ ಹಲವರು ಅಕ್ಕಿ ತೆಗೆದುಕೊಳ್ಳುತ್ತಿರಲಿಲ್ಲ. ಆದ್ದರಿಂದ 1 ವರ್ಷದಿಂದ ಅಕ್ಕಿ ತೆಗೆದುಕೊಳ್ಳದೇ ಇದ್ದರವರನ್ನ ಸಸ್ಪೆಂಡ್ ಮಾಡಿದ್ದೇವೆ . ಡಿಮ್ಯಾಂಡ್ ಬಂದರೆ ಮತ್ತೆ ಅಕ್ಕಿ ಕೊಡುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರೆಯುತ್ತದೆ. ಅಭಿವೃದ್ದಿ ಕೆಲಸಗಳಿಗೆ ಸರ್ಕಾರ ಬಳಿ ಹಣದ ಕೊರತೆ ಇಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ : 570 ಮಂದಿ ಅರೆಸ್ಟ್

ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ 570 ಜನರನ್ನು ಬಂಧಿಸಲಾಗಿದೆ. ಒಟ್ಟು 29,603.15 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಉತ್ತರು ನೀಡಿದರು.ಯಾದಗಿರಿ ಜಿಲ್ಲೆಯಲ್ಲಿ ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅನ್ಯ ಇಲಾಖೆಯ ಅಧಿಕಾರಿಗಳನ್ನು ಇಲಾಖೆ ಕರ್ತ್ಯವ್ಯದಿಂದ ಬಿಡುಗಡೆಗೊಳಿಸಲಾಗಿದೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕೆ.ಎಫ್.ಸಿ.ಎಸ್.ಸಿ. ಗೋದಾಮು ಅಮಾನತ್ತುಗೊಳಿಸಲಾಗಿರುತ್ತದೆ.ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ ಅಗತ್ಯ ವಸ್ತುಗಳ ಕಾಯ್ದೆ 1955ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತಿದೆ.
ಪಡಿತರ ಚೀಟಿದಾರರು ಪಡಿತರ ಅಕ್ಕಿಯನ್ನು ದುರ್ಬಳಕೆ ಮಾಡಿಕೊಂಡ ಪ್ರಕರಣಗಳು ಕಂಡುಬಂದಲ್ಲಿ ಸದರಿ ಪಡಿತರ ಚೀಟಿಗಳನ್ನು ರದ್ದುಪಡಿಸಿ ಅಂತವರ ವಿರುದ್ಧ ನಿಯಾಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ. ನ್ಯಾಯಬೆಲೆ ಅಂಗಡಿ, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚಿಸಿ ಪಡಿತರ ವಿತರಣೆಯನ್ನು ಪರಿಶೀಲಿಸಲಾಗುತ್ತಿದೆ.


ಪ್ತಿ ಮಾಹೆ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿ ಆಹಾರ ಅದಾಲತ್ಗಳನ್ನು ನಡೆಸಿ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ರಾಜ್ಯ ಮಟ್ಟದಲ್ಲಿ ಆಹಾರ ಜಾಗೃತ ದಳ ರಚಿಸಿ ಅಕ್ರಮಗಳ ಬಗ್ಗೆ ನಿಯಮಾನುಸಾರ ಕ್ರಮವಹಿಸಲಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular