ಗುಜರಾತ್ ‘ನಲ್ಲಿ 26 ಸದಸ್ಯರೊಂದಿಗೆ ಹೊಸ ಸಚಿವ ಸಂಪುಟ ರಚನೆಯಾಗಿದ್ದು, ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿಗೆ ಸಚಿವೆ ಸ್ಥಾನ ಸಿಕ್ಕಿದೆ.
ಗುಜರಾತ್ ಸರ್ಕಾರದಲ್ಲಿರುವ ಎಲ್ಲಾ ಸಚಿವರು ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೊರತುಪಡಿಸಿ, ಉಳಿದವರೆಲ್ಲರೂ ತಮ್ಮ ಹುದ್ದೆಗಳನ್ನು ತೊರೆದಿದ್ದಾರೆ.
ಈ ಹಿನ್ನೆಲೆ ಗುಜರಾತ್ ಸರ್ಕಾರ ಇಂದು ಬೆಳಿಗ್ಗೆ 11:30 ಕ್ಕೆ ಸಂಪುಟ ವಿಸ್ತರಣೆ ಮಾಡಿದೆ. ಸ್ಟಾರ್ ಕ್ರಿಕೆಟಿಗ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಕೂಡ ಹೊಸ ಸಂಪುಟದಲ್ಲಿ ಅವಕಾಶ ಪಡೆದಿದ್ದಾರೆ. ಇಂದು ರಿವಾಬಾ ಜಡೇಜಾ ಸೇರಿ 26 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಗುಜರಾತ್‌ನಲ್ಲಿ ಶುಕ್ರವಾರ ಬಿಜೆಪಿ ಸರ್ಕಾರವು 25 ಸದಸ್ಯರ ಹೊಸ ಸಚಿವ ಸಂಪುಟವನ್ನು ಅನಾವರಣಗೊಳಿಸಿದ್ದು, ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಉಪಮುಖ್ಯಮಂತ್ರಿಯಾಗಿ ಮತ್ತು ಕ್ರಿಕೆಟಿಗ ರವೀಂದ್ರ ಜಡೇಜಾ ಅವರ ಪತ್ನಿ ರಿವಾಬಾ ಜಡೇಜಾ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
2022 ರ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿಯನ್ನು 1 ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ ಸಾಂಘವಿ, ಗಾಂಧಿನಗರದ ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಸಮ್ಮುಖದಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
#WATCH | Gandhinagar | Harsh Sanghavi takes oath as Deputy Chief Minister of Gujarat pic.twitter.com/rJ5fYP4utC
— ANI (@ANI) October 17, 2025