HomeLive Newsದಸರಾ ವೇಳೆಗೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಅಚ್ಚರಿ ಹೇಳಿಕೆ ನೀಡಿದ ಆರ್. ಅಶೋಕ್

ದಸರಾ ವೇಳೆಗೆ ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ: ಅಚ್ಚರಿ ಹೇಳಿಕೆ ನೀಡಿದ ಆರ್. ಅಶೋಕ್

ಮೈಸೂರು: ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಆಚರಿಸುವುದಿಲ್ಲ. ಹೊಸ ಮುಖ್ಯಮಂತ್ರಿ ದಸರಾ ಆಚರಿಸಲಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಸೆಪ್ಟೆಂಬರ್ ನಲ್ಲಿ ಕಾಂಗ್ರೆಸ್ ನಲ್ಲಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ಮೈಸೂರಿನಲ್ಲಿ ಮಾತನಾಡಿದ ಆರ್. ಅಶೋಕ್, ಸಿಎಂ ಎಂಬ ಬದಲಾವಣೆ ನಿಶ್ಚಿತ. ಶಾಸಕರು, ಸಚಿವರು ಕೂಡ ಅದನ್ನೇ ಹೇಳುತ್ತಿದ್ದಾರೆ. ಅಧಿಕಾರ ಹಸ್ತಾಂತರ ಮೊದಲೇ ನಿಶ್ಚಯವಾಗಿದೆ. ಆದರೂ, ಸಿದ್ದರಾಮಯ್ಯ ಏನೂ ಆಗಿಲ್ಲ ಎನ್ನುವ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಲ್ಲಿ ಅಧಿಕಾರದ ಕಿತ್ತಾಟ ತಾರಕಕ್ಕೇರಿದ್ದು, ಈ ಭ್ರಷ್ಟ ಸರ್ಕಾರ ಯಾವಾಗ ಕಿತ್ತು ಹೋಗುತ್ತದೆ ಎಂದು ಜನ ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular