ನಾಳೆಯಿಂದ ದೇಶದಲ್ಲಿ 3 ಹೊಸ ಕಾನೂನುಗಳು ಜಾರಿ

ನವದೆಹಲಿ: ಜುಲೈ 1 ನಾಳೆಯಿಂದ ದೇಶದಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತೆ-Indian Code, ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ – Indian civil Protection code ಮತ್ತು ಭಾರತೀಯ ಸಾಕ್ಷಿ ಕಾಯಿದೆ – Indian Evidence Act ಜಾರಿಯಾಗಲಿದೆ.

ಹೊಸ ಕ್ರಿಮಿನಲ್ ಕಾನೂನುಗಳ ಪ್ರಮುಖ ಲಕ್ಷಣಗಳ ಬಗ್ಗೆ ಮಹಿಳೆಯರು, ವಿದ್ಯಾರ್ಥಿಗಳು, ಯುವಕರು, ಹಿರಿಯ ನಾಗರಿಕರು ಹಾಗೂ ಗಣ್ಯ ವ್ಯಕ್ತಿಗಳಿಗೆ ತಿಳಿಸಲು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷವೇ ಸಂಸತ್ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಜುಲೈ 1ರಿಂದ ಮೂರು ಕಾನೂನುಗಳು ಜಾರಿಗೆ ಬರಲಿವೆ ಎಂದು ಅಧಿಸೂಚನೆ ಹೊರಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read